Advertisement
ಸಾಮಾಜಿಕ ಜಾಲತಾಣಗಳ ಬಳಕೆದಾರರು ತಮ್ಮ ಖಾತೆಗಳಿಗೆ ಆಧಾರ್ ಕಾರ್ಡ್ ಜೋಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಅನಿರುದ್ಧ್ ಬೋಸ್ ನೇತೃತ್ವದ ನ್ಯಾಯಪೀಠಕ್ಕೆ ಈ ಬಗ್ಗೆ ಅರಿಕೆ ಮಾಡಿಕೊಂಡಿದ್ದಾರೆ.
Related Articles
Advertisement
ವರದಿ ಸಲ್ಲಿಸುವಂತೆ ಸೂಚನೆ: ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಕೈಗೊಳ್ಳಬಹುದಾದ ನಿಯಮಗಳ ಬಗ್ಗೆ ತನಗೆ ವರದಿ ನೀಡಬೇಕು. ಜತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶಗಳ ಮೇಲೆ ಸರಕಾರ ನಿಗಾ ವಹಿಸಲು ಅನುಕೂಲವಾಗುವ ಡಿಕ್ರಿಪ್ಷನ್ ಸೌಲಭ್ಯವನ್ನು ನೀಡುವಂತೆ ಸಾಮಾಜಿಕ ಜಾಲತಾಣ ಸಂಸ್ಥೆಗಳನ್ನು ಸರಕಾರ ಯಾವ ರೀತಿಯಲ್ಲಿ ಒಪ್ಪಿಸಲಿದೆ ಎಂದು 2020ರ ಜನವರಿ ಮೊದಲ ವಾರದೊಳಗೆ ವರದಿ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಸೂಚಿಸಿತು.
ಎಲ್ಲಾ ಪ್ರಕರಣಗಳೂ ಸುಪ್ರೀಂಗೆ ವರ್ಗಮಹತ್ವದ ಬೆಳವಣಿಗೆಯೊಂದರಲ್ಲಿ, ದೇಶದ ನಾನಾ ಹೈಕೋರ್ಟ್‌ಗಳಲ್ಲಿ ವಿಚಾರಣೆ ಹಂತದಲ್ಲಿರುವ “ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ’ ಕುರಿತಾದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್, ತನ್ನ ವ್ಯಾಪ್ತಿಗೆ ವರ್ಗಾಯಿಸಿಕೊಂಡಿದೆ. ಎಲ್ಲ ಪ್ರಕರಣಗಳ ವರ್ಗಾವಣೆ ಕೋರಿ ಫೇಸ್‌ಬುಕ್ ಸಂಸ್ಥೆಯು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಅವರುಳ್ಳ ನ್ಯಾಯಪೀಠ, 2020ರ ಜನವರಿ ಕೊನೆಯ ವಾರದೊಳಗೆ ಆ ಎಲ್ಲಾ ಪ್ರಕರಣಗಳನ್ನು ತನಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್‌ರವರಿಗೆ ಸೂಚಿಸಿತು.