ಮಧ್ಯಪ್ರದೇಶ: ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿದ ವೇಳೆ ಅಧಿಕಾರಿಗಳೇ ಬೆಚ್ಚಿ ಬೀಳಿಸುವಂತ ವಸ್ತುಗಳು ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಮಕ್ಕಳ ಹಕ್ಕು ಸಂರಕ್ಷಣಾ ಆಯೋಗದ ಸದಸ್ಯರ ತಂಡ ಮಧ್ಯಪ್ರದೇಶದ ಮೋರೆನಾ ಜಿಲ್ಲೆಯಲ್ಲಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ದಿಢೀರ್ ಭೇಟಿ ನೀಡಿದೆ ಈ ವೇಳೆ ಅಧಿಕಾರಿಗಳ ತಂಡ ಶಾಲೆಯನ್ನು ತಪಾಸಣೆ ನಡೆಸಿದ ವೇಳೆ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್ ಪ್ಯಾಕೆಟ್ ಪತ್ತೆಯಾಗಿದ್ದು ಇದನ್ನು ಕಂಡ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ನಿವೇದಿತಾ ಶರ್ಮಾ, ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಎ ಕೆ ಪಾಠಕ್ ಅವರನ್ನೊಳಗೊಂಡ ತಂಡ ಈ ಶಾಲೆಗೆ ದಿಢೀರ್ ಭೇಟಿ ನೀಡಿ ತಪಾಸಣೆಗೆ ಮುಂದಾಗಿಗೆ ಈ ವೇಳೆ ಶಾಲೆಯ ಎಲ್ಲಾ ಕೊಠಡಿಗಳನ್ನು ತಪಾಸಣೆ ನಡೆಸಿ ಬಳಿಕ ಮುಖ್ಯೋಪಾಧ್ಯಾಯರ ಕೊಠಡಿಯನ್ನು ಪರಿಶೀಲನೆ ನೆಡೆಸುವ ವೇಳೆ ಮುಖ್ಯೋಪಾಧ್ಯಾಯರು ತಪಾಸಣೆ ನಡೆಸಲು ಸಹಕರಿಸಲಿಲ್ಲ ಇದರಿಂದ ಅನುಮಾನಗೊಂಡ ಅಧಿಕಾರಿಗಳು ಕೊಠಡಿಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಮದ್ಯದ ಬಾಟಲಿ, ಹಾಗೂ ಕಾಂಡೋಮ್ ಪ್ಯಾಕೆಟ್ ಇರುವುದು ಬೆಳಕಿಗೆ ಬಂದಿದೆ.
ಅಷ್ಟು ಮಾತ್ರವಲ್ಲದೆ ಶಾಲಾ ಗ್ರಂಥಾಲಯದಲ್ಲಿ ನಿರ್ದಿಷ್ಟ ಧರ್ಮವನ್ನು ಪ್ರಚಾರ ಮಾಡುವ ಪುಸ್ತಕವೊಂದು ಕಂಡುಬಂದಿರುವುದನ್ನು ಡಾ.ಶರ್ಮಾ ಪ್ರಸ್ತಾಪಿಸಿದರು.
ಪರಿಶೀಲನೆಯ ಫಲವಾಗಿ ಕೂಡಲೇ ಶಾಲೆಯನ್ನು ವಶಕ್ಕೆ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ವಿದೇಶಿ ಮದ್ಯದ ಬಾಟಲಿಗಳನ್ನು ಹೊಂದಿದ್ದ ಪ್ರಾಂಶುಪಾಲರ ವಿರುದ್ಧ ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕಠಿಣ ಕ್ರಮಗಳ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ