Advertisement

ಮದ್ಯ ಖರೀದಿ ವಯಸ್ಸು ಯಥಾಸ್ಥಿತಿ: ಸಾರ್ವಜನಿಕ ವಿರೋಧಕ್ಕೆ ಮಣಿದ ಸರ್ಕಾರ

10:11 PM Jan 18, 2023 | Team Udayavani |

ಬೆಂಗಳೂರು: ಮದ್ಯ ಖರೀದಿ ವಯಸ್ಸಿನ ಮಿತಿಯನ್ನು 21ರಿಂದ 18 ವರ್ಷಕ್ಕೆ ಇಳಿಕೆ ಮಾಡುವ ಪ್ರಸ್ತಾಪವನ್ನು ಸಾರ್ವಜನಿಕರ ವಿರೋಧ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಕೈ ಬಿಟ್ಟಿದೆ.

Advertisement

ಈ ಸಂಬಂಧ ಅಬಕಾರಿ ಆಯುಕ್ತರು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಸ್ತಾಪ ಕೈ ಬಿಡಲಾಗಿದೆ. ಮದ್ಯ ಖರೀದಿ ವಯೋಮಿತಿ ಹಿಂದಿನಂತೆ 21 ವರ್ಷವೇ ಆಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಅಬಕಾರಿ ಕಾಯಿದೆ ಪ್ರಕಾರ 18 ವರ್ಷದೊಳಗಿನವರಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಅಬಕಾರಿ ನಿಯಮದಲ್ಲಿ 21 ವರ್ಷದವರೆಗೆ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ನಿಯಮ ತಿದ್ದುಪಡಿ ಬಯಸಿತ್ತು. ಆದರೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ವಾಪಸ್‌ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next