Advertisement

June 1 ರಿಂದ 3 ರವರೆಗೆ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

11:41 PM May 28, 2024 | Team Udayavani |

ಮಂಗಳೂರು: ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ. 1ರಂದು ಸಂಜೆ 4ರಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಆದೇಶಿಸಿದ್ದಾರೆ.

Advertisement

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದ ಅಂಗಡಿ, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್‌ ಹೊಟೇಲ್‌ಗ‌ಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next