Advertisement
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ಶನಿವಾರ ಉದ್ಯೋಗ ತರಬೇತಿ ಇಲಾಖೆ ವತಿಯಿಂದ 1.36 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸರ್ಕಾರಿ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ವಿಪಕ್ಷಗಳ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದರು.
Related Articles
Advertisement
ಕೆ.ಸಿ. ವ್ಯಾಲಿ ನೀರು ಶುದ್ಧ, ಕೋಲಾರ ಮಲೆನಾಡಾಗಿದೆ: ಕೆ.ಸಿ.ವ್ಯಾಲಿ ಯೋಜನೆ ಮೂಲಕ ಕೋಲಾರಕ್ಕೆ ಹರಿಸುತ್ತಿರುವ ನೀರು ಶುದ್ಧವಾಗಿದೆ. ಒಳ್ಳೆಯ ಕೆಲಸ ಮಾಡಿದಾಗ ವಿರೋಧ ಮಾಡುವುದು ಸರಿಯಲ್ಲ. ಯಾರೊ ಒಬ್ಬರು ವಿರೋಧ ಮಾಡಿದರೆ ದೇಶವೆಲ್ಲಾ ವಿರೋಧ ಮಾಡಿದಂತೆ ಅಲ್ಲ ಎಂದು ಕೆ.ಸಿ.ವ್ಯಾಲಿ ಯೋಜನೆ ವಿರೋಧಿಸುತ್ತಿರುವ ನೀರಾವರಿ ಹೋರಾಟಗಾರರ ಕ್ರಮಕ್ಕೆ ಸಚಿವ ನಾಗೇಶ್ ಗರಂ ಆದರು.
ಕೋಲಾರಕ್ಕೆ ಕೆ.ಸಿ. ವ್ಯಾಲಿ ನೀರು ಬಂದ ಮೇಲೆ ಮಲೆನಾಡು ಆಗಿದೆ. ನೀರಿಗೆ ಸಾಕಷ್ಟು ಬೇಡಿಕೆ ಇದೆ. ಎಲ್ಲಾ ಕೆರೆ, ಕುಂಟೆಗಳು ತುಂಬಿ ಬತ್ತಿ ಹೋಗಿದ್ದ ಕೊಳವೆ ಬಾವಿಗಳು ಮರುಪೂರ್ಣಗೊಂಡಿವೆ ಎಂದರು. ಕೆಸಿ ವ್ಯಾಲಿ ಯೋಜನೆಯ ನೀರನ್ನು ನಾವು ಶುದ್ಧೀಕರಿಸಿಯೇ ಕೊಡುತ್ತಿದ್ದೇವೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಕೇಳಿದ್ದೆ. ಆದರೆ ಕೋಲಾರ ಕೊಟ್ಟರು. ಎರಡು ಜಿಲ್ಲೆಗಳಿಗೆ ಉಸ್ತುವಾರಿ ಕೊಟ್ಟಿದ್ದರೂ ಇನ್ನಷ್ಟು ಚೆನ್ನಾಗಿ ಕೆಲಸ ಮಾಡಬಹುದಿತ್ತು. ಸ್ನೇಹಿತ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಿಕ್ಕಿದೆ. ಅವರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. -ಎಚ್.ನಾಗೇಶ್, ಅಬಕಾರಿ ಸಚಿವ