Advertisement

Sagara ಖಾಸಗಿ ಬಸ್ ನಿಲ್ದಾಣದ ಎದುರು ಮದ್ಯದಂಗಡಿ; ವಿರೋಧ

08:24 PM Aug 29, 2023 | Shreeram Nayak |

ಸಾಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ಪಕ್ಕದ ಖಾಸಗಿ ಬಸ್ ನಿಲ್ದಾಣದ ಎದುರು ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.

Advertisement

ಸ್ಥಳೀಯವಾಗಿ ಮದ್ಯದಂಗಡಿ ತೆರೆಯಲು ನಮ್ಮ ವಿರೋಧವಿದೆ. ಈ ಭಾಗದಲ್ಲಿ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದಾರೆ. ಇಲ್ಲಿ ಮದ್ಯದಂಗಡಿ ತೆರೆಯುವುದರಿಂದ ದುಡಿದ ಹಣವನ್ನು ಮದ್ಯ ಸೇವನೆಗೆ ವ್ಯಯಿಸುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನಲ್ಲಿ ಮದ್ಯ ಸೇವನೆ ಮಾಡಿ ಆರೋಗ್ಯ ಕೆಡಿಸಿಕೊಂಡು ಮೃತಪಡುತ್ತಿರುವ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಪ್ರತಿಭಟನಾನಿರತರು ದೂರಿದರು.

ಬಸ್ ನಿಲ್ದಾಣದ ಎದುರು ಮದ್ಯದಂಗಡಿ ತೆರೆದಿರುವುದರಿಂದ ಕುಡಿದ ಅಮಲಿನಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇಲ್ಲದಿಲ್ಲ. ಆದ್ದರಿಂದ ಮದ್ಯದಂಗಡಿಯನ್ನು ಇಲ್ಲಿಂದ ಬೇರೆ ಕಡೆ ವರ್ಗಾಯಿಸಬೇಕು. ಇಲ್ಲವಾದಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅಕ್ಕಮ್ಮ, ರೇಷ್ಮಾ, ಸುಪ್ರಿತ, ಸಂಧ್ಯಾ, ಕೀರ್ತಿ, ಗೀತಾ, ಇಂದಿರಾ, ಶೋಭಾ, ಶ್ವೇತಾ, ಸುಮಿತ್ರ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next