ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ.19ರವರೆಗೆ ಮೈಸೂರು ಜಿಲ್ಲೆಯಲ್ಲಿ 331 ದಾಳಿಗಳನ್ನು ನಡೆಸಿ 1.6 ಕೋಟಿ ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ 151 ಜನರನ್ನು ಬಂಧಿಸಿ, 203 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನು, ಹುಣಸೂರು ತಾಲೂಕು
ಗಾವಡಗೆರೆ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.4 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 5ಲಕ್ಷ ರೂ. ಮೌಲ್ಯದ ಕುಕ್ಕರ್‌ಗಳನ್ನು ಯಸಳೂರು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಹಾಸನದಲ್ಲಿ ಮಾ 10 ರಿಂದ ಈವರೆಗೆ 209 ದಾಳಿಗಳನ್ನು ನಡೆಸಲಾಗಿದ್ದು, 1,61,01,894 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳುಮಾ ಹಿತಿ ನೀಡಿದರು.
ನಗದು ವಶ: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 1.56 ಕೋಟಿ ನಗದು, 21.50 ಲಕ್ಷ ಮೌಲ್ಯದ 1,500 ಲೀಟರ್ ಮದ್ಯ, 1.47 ಕೋಟಿ ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಂಡು 106 ಎಫ್ಐಆರ್ ದಾಖಲಿಸಿಕೊಂಡಿವೆ. ವಿವಿಧ ಬಗೆಯ 390 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.