ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯೊಂದಿಗೆ ನೂರು ನವೋದ್ಯಮಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಹತ್ತು ಕಂಪನಿಗಳು ಉಪಗ್ರಹ ಮತ್ತು ರಾಕೆಟ್ ನಿರ್ಮಾಣದಲ್ಲಿ ತೊಡಗಿಕೊಂಡಿವೆ ಎಂದು ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದರು.
ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮಿಟ್‌ನ ಎರಡನೇ ದಿನವಾದ ಗುರುವಾರ ಅವರು “ಭಾರತದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ; ಜಾಗತಿಕ ಒಳಿತಿಗಾಗಿ ನಾವೀನ್ಯತೆ’ ವಿಚಾರ ಕುರಿತು ಉಪನ್ಯಾಸ ನೀಡಿದರು.
ಇಸ್ರೋ ಜತೆಗೆ ನೋಂದಾಯಿಸಿಕೊಂಡ ಈ ನೂರು ನವೋದ್ಯಮ (ಸ್ಟಾರ್ಟ್‌ಅಪ್)ಗಳಿಗೆ ಬಾಹ್ಯಾಕಾಶ ಸಂಶೋಧನೆಯ ಹಲವು ವಲಯಗಳಲ್ಲಿ ನೆರವು ನೀಡಲಾಗುತ್ತಿದೆ. ಆರಂಭದಿಂದ ಹಿಡಿದು ಅಂತ್ಯದವರೆಗೂ ಪೋಷಣೆ ಮಾಡಲಿದೆ. ಸದ್ಯಕ್ಕೆ 10 ಕಂಪನಿಗಳು ಉಪಗ್ರಹ ಮತ್ತು ರಾಕೆಟ್ ನಿರ್ಮಾಣದಲ್ಲಿ ತೊಡಗಿಕೊಂಡಿವೆ ಎಂದು ಅವರು ಹೇಳಿದರು.
ಕೆಲವೇ ತಿಂಗಳಲ್ಲಿ ಚಂದ್ರಯಾನ-3 ಕಕ್ಷೆಗೆ- ಇಸ್ರೋ: ಭಾರತದ ಹಲವು ಕಂಪನಿಗಳಿಗೆ ಬಾಹ್ಯಾಕಾಶ ವಲಯದಲ್ಲಿ ಮಹತ್ವದ ಪಾತ್ರ ವಹಿಸುವ ಶಕ್ತಿ ಇದೆ. ಇಸ್ರೋ ಇವುಗಳಿಗೆ ಎಲ್ಲ ಹಂತಗಳಲ್ಲಿ ನೆರವು ನೀಡಲಾಗುತ್ತಿದೆ. ಈ ಮಧ್ಯೆ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಇನ್ನು ಕೆಲವೇ ತಿಂಗಳಲ್ಲಿ ಕಕ್ಷೆಯನ್ನು ಸೇರಲಿದೆ. ಈ ನಿಟ್ಟಿನಲ್ಲಿ ಇಸ್ರೋ, ಅಮೆರಿಕದ ನಾಸಾ ಸಂಸ್ಥೆಯೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಈ ಯೋಜನೆಯ ರಾಕೆಟ್‌ನಲ್ಲಿ ಬಳಸಲ್ಪಟ್ಟ ಕಂಪ್ಯೂಟರ್ ಅನ್ನು ಭಾರತದÇÉೇ ತಯಾರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಗತ್ತಿನ ಎಲ್ಲ ಕಡೆಗಳಲ್ಲೂ ಈಗ ಬಾಹ್ಯಾಕಾಶ ಪ್ರವಾಸೋದ್ಯಮ ಜನಪ್ರಿಯವಾಗುತ್ತಿದೆ. ಇಸ್ರೋ ಸಂಸ್ಥೆಯು ದೇಶದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಮತ್ತು ಆಧುನಿಕ ತಯಾರಿಕೆ ವ್ಯವಸ್ಥೆಗಳಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದೆ. ಉಳಿದಂತೆ ಉಪಗ್ರಹ ತಂತ್ರಜ್ಞಾನವನ್ನು ಮತ್ತೆ ಮುಂಚೂಣಿಗೆ ತರುವ ಪ್ರಯತ್ನಗಳು ನಡೆದಿವೆ. ಅಲ್ಲದೆ, ಪರಿಸರಸ್ನೇಹಿ ಮತ್ತು ಹೈಬ್ರಿಡ್ ಪ್ರೊಪೊಲÒನ್ (ನೋದನ), ಸಣ್ಣ ರಾಕೆಟ್‌ಗಳ ಉಡಾವಣೆ, ಕಾರ್ಬನ್ ಫೈಬರ್ ತಂತ್ರಜ್ಞಾನ, ರೋಬೋಟಿಕÕ…, ಡ್ರೋನ್, ಕ್ವಾಂಟ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಇಸ್ರೋ ಛಾಪು ಮೂಡಿಸುತ್ತಿದೆ ಎಂದು ಸೋಮನಾಥ್ ವಿವರಿಸಿದರು.