ನವ ದೆಹಲಿ : ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಸಿಇಸಿ ಅಂತಿಮಗೊಳಿಸಿದೆ.
ಬಿಜೆಪಿ ರಾಷ್ಟ್ರಆಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ಮಾರ್ಚ್ 13(ಶನಿವಾರ) ರಂದು ನಡೆಯಿತು.
ಓದಿ : ಪಶ್ಚಿಮ ಬಂಗಾಳ : ಗಾಯಗೊಂಡ ಹುಲಿ ಅತ್ಯಂತ ಅಪಾಯಕಾರಿ ಪ್ರಾಣಿ : ಮಮತಾ ಕಿಡಿ
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಚುನಾವಣಾ ಸಮಿತಿಯ ಇತರ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಜೆಪಿ ಸಿಇಸಿ ಅಂತಿಮಗೊಳಿಸಿದ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ವಿಧಾನ ಸಭಾ ಚುನಾವಣೆಗೆ ಅಂತಿಮಗೊಳಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಟ್ಯಾಗ್ ಮಾಡುವುದರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಶುಭಾಶಯಗಳು ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಓದಿ :
ಸಾವಿಗೆದುರಾಗಿ ನಿಂತ ‘ಮರುಭೂಮಿಯ ಹೂ’ವಿನ ಘಮ…!