ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಸಿದ್ಧವಾಗಿದ್ದು ಪಕ್ಷದ ಅಭ್ಯರ್ಥಿಗಳ ಪಟ್ಟಿ ಜನವರಿ ಮೊದಲ ವಾರ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ಈಗಾಗಲೇ ಚುನಾವಣಾ ಸಮಿತಿ ರಚನೆ ಮಾಡಲಾಗಿದೆ. ಜನವರಿ ಮೊದಲ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಎಲ್ಲಿ ಹೋರಾಟ ಮಾಡುತ್ತದೋ ಅಲ್ಲಿ ಕೋವಿಡ್ ಕಾಣುತ್ತದೆ. ರಾಜ್ಯದಲ್ಲಿ ವಿಧಾನಮಂಡಲ ಕಲಾಪ ಮಾಡುವಾಗ, ಬಿಜೆಪಿ ಜನ ಸಂಕಲ್ಪ ಯಾತ್ರೆ ಮಾಡುವಾಗ, ಬಿಜೆಪಿ ಹಾಗೂ ಪ್ರಧಾನಮಂತ್ರಿಗಳ ಕಾರ್ಯಕ್ರಮ ಇರುವ ಕಡೆಗಳಲ್ಲಿ ಕೋವಿಡ್ ಇರುವುದಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಗಂಭೀರ ಚರ್ಚೆ ಹೊರತಾಗಿ ಇಂತಹ ನಿಂದನೆ ಚರ್ಚೆಗಳು ಹೆಚ್ಚಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತಿರಿಸಿದ ಅವರು, ನಾವು ಜನರ ಕೆಲಸ ಮಾಡಲು ಆಯ್ಕೆಯಾಗಿದ್ದೇವೆ. ಬಿಜೆಪಿಯವರು ಜನರ ಕೆಲಸ ಮಾಡುತ್ತಿದ್ದಾರೆಯೇ ಜನರಪರ ಕೆಲಸ ಮಾಡುವುದನ್ನು ಬಿಟ್ಟು ನಾಯಿಗೆ ಹೋಲಿಕೆ ಮಾಡುವ ಹೇಳಿಕೆ ನೀಡಿದರೆ ನಾವು ಸುಮ್ಮನೆ ಕೂರಲು ಸಾಧ್ಯವೇ ಎಂದು ಪ್ರಶ್ನಿಸಿದರು.