Advertisement

ಇನ್ನೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಸಿದ್ದರಾಮಯ್ಯ

09:21 AM Sep 25, 2019 | Team Udayavani |

ಹುಬ್ಬಳ್ಳಿ: ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ ದೇವೇಗೌಡರ ಹೇಳಿಕೆ‌ ಮೂಲಕವೇ ಗೊತ್ತಾಗುತ್ತದೆ. ಬಿಜೆಪಿಗೆ ಮತ ನೀಡಲು ಹೇಳಿದ್ದು ಕುಮಾರಸ್ವಾಮಿ ಅಂತ. ಸತ್ಯ ಹೇಳಿದ ಮೇಲೆ ನಾಟಕ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಸ್ವತಃ ತಾವೇ ಸತ್ಯ ಒಪ್ಪಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ಅತ್ಯಂತ ಕೆಟ್ಟದಾಗಿತ್ತು ಎಂದು ಹೇಳಿದ್ದಾರೆ. ಅವರ ಸರ್ಕಾರಕ್ಕೆ ಅವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಹೀಗಾಗಿ ಈ ಹೇಳಿಕೆಗೆ ನಾನು ಯಾಕೆ ಪ್ರತಿಕ್ರಿಯೆ ನೀಡಿಲಿ? ನಾನೇನು ಹೇಳಿಲ್ಲ, ಅವರೇ ಒಪ್ಪಿಕೊಂಡಿದ್ದಾರೆ. ಕುಮಾರಸ್ವಾಮಿ ಚುನಾವಣೆ ಬಂದಿರೊ‌ ಹಿನ್ನೆಲೆ ಈರೀತಿ ಮಾತನಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next