Advertisement
ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನವದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್ ಚುನಾವಣಾ ಸಮಿತಿ ಅಧ್ಯಕ್ಷ$ಮಧುಸೂಧನ್ ಮಿಸಿŒ ನೇತೃತ್ವದ ಆರು ಜನರ ತಂಡ ಸುದೀರ್ಘ ಚರ್ಚೆ ನಡೆಸಿದೆ. ಆದರೆ, ಏ. 12ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ಹೇಳಿವೆ.
Related Articles
Advertisement
ಉಳಿದ ಸುಮಾರು ಎಂಭತ್ತು ಕ್ಷೇತ್ರಗಳಲ್ಲಿ ಎರಡು- ಮೂರು ಅಭ್ಯರ್ಥಿಗಳ ಹೆಸರುಗಳಿವೆ. ಹೀಗಾಗಿ ಅವುಗಳಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಕಾರಣದಿಂದಲೇ ಅಂತಹ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇನ್ನಷ್ಟು ವಿಳಂಬವಾಗಬಹುದು ಎನ್ನಲಾಗಿದೆ.
ಸಂಸದರೊಂದಿಗೆ ಸಭೆ:ಸ್ಕ್ರೀನಿಂಗ್ ಕಮಿಟಿ ಸಭೆಗೆ ಹಾಜರಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್ ಅಂತಿಮಗೊಳಿಸುವ ಮುನ್ನ ಸಂಸದರ ಅಭಿಪ್ರಾಯವನ್ನೂ ಪಡೆದುಕೊಳ್ಳಬೇಕು ಎಂದು ಎಐಸಿಸಿ ಸ್ಪಷ್ಟ ಸೂಚನೆ ನೀಡಿರುವ ಕಾರಣ ಈ ಸಭೆ ನಡೆದಿದೆ. ದೆಹಲಿಯಲ್ಲಿ ಬೀಡುಬಿಟ್ಟ ಆಕಾಂಕ್ಷಿಗಳು
ದೆಹಲಿಯಲ್ಲಿ ಟಿಕೆಟ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಕಾಂಕ್ಷಿಗಳೆಲ್ಲಾ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ತಮ್ಮ ನಾಯಕರ ಮೂಲಕ ಟಿಕೆಟ್ ಗಿಟ್ಟಿಸಲು ಕೊನೆ ಹಂತದ ಕಸರತ್ತು ನಡೆಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದ್ದು, ಮಂಗಳವಾರವೂ ಸಭೆ ನಡೆದು ಅಭ್ಯರ್ಥಿಗಳ ಒಂದು ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಪಟ್ಟಿ ಪ್ರಕಟಗೊಳ್ಳಬೇಕಿದ್ದು, ಕೆಲವರು ಅದುವರೆಗೂ ದೆಹಲಿಯಲ್ಲೇ ಮೊಕ್ಕಾಂ ಹೂಡುವ ಸಾಧ್ಯತೆ ಇದೆ. ಇನ್ನು ಕೆಲವರು ಮಂಗಳವಾರ ಬೆಂಗಳೂರಿಗೆ ವಾಪಸಾಗಿ ಮತ್ತೆ ಮಾ. 11 ಅಥವಾ 12ರಂದು ದೆಹಲಿಗೆ ತೆರಳಲಿದ್ದಾರೆ.