Advertisement

Congress: ಎರಡ್ಮೂರು ದಿನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ

08:48 PM Mar 07, 2024 | Team Udayavani |

ಬೀದರ: ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಎರಡ್ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಕೇಂದ್ರ ಚುನಾವಣೆ ಸಮಿತಿಯಲ್ಲಿ ಚರ್ಚೆ ಬಳಿಕ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದ್ದಾರೆ. ಪ್ರಕರಣವನ್ನು ಎನ್‌ಐಎಗೆ ವಹಿಸಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಬರುವುದಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next