Advertisement
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಗುರುವಾರ ಮಧ್ಯಾಹ್ನ ದೆಹಲಿಗೆ ತೆರಳಿದ್ದಾರೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ 20 ಸ್ಥಾನಗಳು ದೊರೆತಿದ್ದು, ಅವುಗಳಲ್ಲಿ 10 ಹಾಲಿ ಸಂಸದರಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದರಿಂದ 9 ಹಾಲಿ ಸಂಸದರಿಗೆ ಟಿಕೆಟ್ ಬಹುತೇಕ ಖಚಿತ ಎಂದು ತಿಳಿದು ಬಂದಿದೆ. ಉಳಿದ ಹತ್ತು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಇಬ್ಬರು ಅಭ್ಯರ್ಥಿಗಳ
ಅದರಂತೆ ಗುರುವಾರ ಸಂಜೆನಡೆಯುವ ಸಭೆಯ ಲ್ಲಿ ಕ್ಷೇತ್ರಗಳ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದುಹೇಳಲಾಗುತ್ತಿದೆ.