Advertisement

ಎರಡು ದಿನದೊಳಗೆ ಕೈ ಅಭ್ಯರ್ಥಿಗಳ ಪಟ್ಟಿ

11:26 PM Sep 21, 2019 | Lakshmi GovindaRaju |

ಕಲಬುರಗಿ: ಮಹಾರಾಷ್ಟ್ರ ವಿಧಾನಸಭೆಗೆ ಅ.21ರಂದು ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸನ್ನದ್ಧಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಉಸ್ತುವಾರಿ ಡಾ.ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಈ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯವಾಗಿ ಎನ್‌ಸಿಪಿ- ಕಾಂಗ್ರೆಸ್‌ ಮೈತ್ರಿಯಾಗಿ ಚುನಾವಣೆ ಎದುರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ಈಗಾಗಲೇ ಶೇ.75 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಎರಡು ದಿನದೊಳಗೆ ಎಲ್ಲ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುವುದು. ಪಟ್ಟಿ ಪ್ರಕಟ ನಂತರ ಚುನಾವಣಾ ಪ್ರಚಾರ ಕೈಗೊಳ್ಳಲಾಗುವುದು. ಮಹಾರಾಷ್ಟ್ರದಲ್ಲಿ ಐದು ವಿಭಾಗ ಮಾಡಿ ಐವರು ಮುಖ್ಯಸ್ಥರನ್ನು ಚುನಾವಣೆ ಪ್ರಚಾರಕ್ಕೆ ನೇಮಕ ಮಾಡಲಾಗಿದೆ. ಈ ಐವರು ಎಲ್ಲೆಡೆ ಸಂಚರಿಸಿ ಪ್ರಚಾರ ಮಾಡುತ್ತಾರೆಂದರು.

ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ ಸರ್ಕಾರದ ವೈಫಲ್ಯತೆ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಬಡವರು, ರೈತರು ದಲಿತರ ವಿಚಾರದಲ್ಲಿ ಧೋರಣೆ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಒಟ್ಟಾರೆ ಈ ಸಲ ಮಹಾರಾಷ್ಟ್ರ ಮತದಾರರು ಬಿಜೆಪಿ-ಶಿವಸೇನೆಗೆ ಮತ ಕೊಡಲ್ಲ ಎಂಬ ವಿಶ್ವಾಸ ಹೊಂದಲಾಗಿದೆ ಎಂದರು. ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷ ನಾಯಕರು ಹಾಗೂ ಇತರೆ ಮುಖಂಡರೆಲ್ಲಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next