Advertisement

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

09:46 PM Sep 28, 2021 | Team Udayavani |

ಬೆಂಗಳೂರು: ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಆಯ್ಕೆಯಲ್ಲಿ ಯುವಕರು ಎಂದರೆ ತೀರಾ ಚಿಕ್ಕವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ದೆಹಲಿಯಲ್ಲಿ ನಾನು ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.

ಯಡಿಯೂರಪ್ಪ ಹಾಗೂ ನಳೀನ್‌ಕುಮಾರ್‌ ಕಟೀಲ್‌ ಅವರು ನಮ್ಮಿಂದ 20 ಶಾಸಕರು ಅವರ ಪಕ್ಷಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರು ನಮ್ಮ ಶಾಸಕರನ್ನು ಸೇರಿಸಿಕೊಳ್ಳಲು ಯಾಕೆ ವಿಳಂಬ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ:ನಗರಸಭೆಯ ಮಳಿಗೆ ಬಳಸಿ ಅಕ್ರಮ ನಾಟಾ ಸಂಗ್ರಹ!

Advertisement

ಸದ್ಯಕ್ಕೆ ನಾವು ಆಪರೇಷನ್‌ ಹಸ್ತದ ವಿಚಾರವಾಗಿ ಯೋಚನೆ ಮಾಡಿಲ್ಲ. ಅವರು ಎಷ್ಟು ಜನರನ್ನು ಕರೆದುಕೊಳ್ಳಬೇಕೋ ಕರೆದುಕೊಳ್ಳಲಿ. ಯಾರೋ ಒಬ್ಬರು 24 ಗಂಟೆಯೊಳಗೆ ಐವರನ್ನು ಕರೆದುಕೊಳ್ಳುತ್ತೇವೆ ಎಂದಿದ್ದರು. ಈಗ ಎಲ್ಲಿದ್ದಾರೋ ಎಂದು ಲೇವಡಿ ಮಾಡಿದರು.

ಸಾಧ್ಯವಿಲ್ಲ
ಜೆಡಿಎಸ್‌ ನಿಂದ ಯಾರೆಲ್ಲ ಬರಲು ಸಿದ್ಧರಿದ್ದಾರೆ ಎಂಬ ಮಾಹಿತಿ ಬಹರಂಗಪಡಿಸಲು ಸಾಧ್ಯವಿಲ್ಲ. ರಾಜಕೀಯ ಸಂಪರ್ಕದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತದ್ದಲ್ಲ. ಜೆಡಿಎಸ್‌ ನದ್ದು ಮಿಷನ್‌ 123, ಬಿಜೆಪಿಯವರದ್ದು ಮಿಷನ್‌ 150. ಆದರೆ, ನಮ್ಮದು ಮಿಷನ್‌ 224 ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next