ಬಳ್ಳಾರಿ: ಮುಂದಿನ ದಿನಗಳಲ್ಲಿ ಬಿಜೆಪಿ ಹಾಗು ಜೆಡಿಎಸ್ ಶಾಸಕರರು ಕಾಂಗ್ರೆಸ್ ಸೇರುತ್ತಾರೆ. ಕಾಂಗ್ರೆಸ್ ಸೇರುವ ದೊಡ್ಡ ಪಟ್ಟಿಯಿದೆ. ಸೂಕ್ತ ಸಮಯದಲ್ಲಿ ಅದನ್ನು ಬಹಿರಂಗ ಮಾಡುತ್ತೇವೆ ಎಂದು ಸಚಿವ ನಾಗೇಂದ್ರ ಹೇಳಿದರು.
ಬರ ಪರಿಸ್ಥಿತಿ ವೀಕ್ಷಣೆ ವೇಳೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಈ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಒಳ್ಳೆಯ ಅಧಿಕಾರ ನಡೆಸುತ್ತಿದ್ದೆ. ಅದನ್ನು ಸಹಿಸದ ಬಿಜೆಪಿಯವರು ಅ ಪ್ರಚಾರ ಮಾಡುತ್ತಾರೆ ಎಂದರು.
ಇದನ್ನೂ ಓದಿ:ಧನುಷ್ ʼCaptain Millerʼಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್ ಆಫೀಸ್ ಫೈಟ್?
ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ವಿಚಾರಕ್ಕೆ ಮಾತನಾಡಿದ ಅವರು, ಜಾತಿ ಗಣತಿ ಬಿಡುಗಡೆಯಲ್ಲಿ ಬಿಜೆಪಿಯವರು ವಿನಾಕಾರಣ ರಾಜಕಾರಣ ಮಾಡುತಿದ್ದಾರೆ. ಯಾರು ಕೂಡಾ ಜಾತಿ ಗಣತಿ ವರದಿಗೆ ವಿರೋಧ ಮಾಡಿಲ್ಲ. ಸೂಕ್ತ ಸಮಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತವೆ. ರಾಹುಲ್ ಗಾಂಧಿ ಅವರು ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ, ಯಾವಾಗ ಬಿಡುಗಡೆ ಮಾಡಬೇಕು ಎನ್ನುವುದು ನಿರ್ಧಾರ ಮಾಡಲಾಗುತ್ತದೆ. ಜಾತಿ ಗಣತಿ ವರದಿ ಬಿಡುಗಡೆ ಮಾಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಕೂಡಾ ಜಾತಿ ಗಣತಿ ಪರವಾಗಿ ಇದ್ದಾರೆ ಎಂದರು.
ಮಾಜಿ ಸಚಿವ ಈಶ್ವರಪ್ಪ ಅವರು ಸಿಎಂ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸೂಕ್ತ ದಾಖಲೆ ಇಲ್ಲದೇ ಜಾತಿಗಣತಿ ಪರವಾಗಿ ಈಶ್ವರಪ್ಪ ಅವರು ಅಪಪ್ರಚಾರ ಮಾಡುತ್ತಾರೆ ಎಂದು ನಾಗೇಂದ್ರ ಹೇಳಿದರು.