Advertisement

ತಮ್ಮ ವಾದವನ್ನು ಆಲಿಸಿ: ಐಪಿಎಸ್‌ ರೂಪಾ ಮನವಿ

06:36 AM Mar 12, 2019 | |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾ ನಟರಾಜನ್‌ಗೆ ಜೈಲಿನಲ್ಲಿ ವಿವಿಐಪಿ ಸೌಲಭ್ಯ ಒದಗಿಸಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿಖಾನೆಯ ನಿವೃತ್ತ ಡಿಜಿಪಿ ಎಚ್‌.ಎನ್‌.ಸತ್ಯನಾರಾಯಣ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ತಮ್ಮ ವಾದವನ್ನೂ ಆಲಿಸುವಂತೆ ಡಿಐಜಿ ಡಿ.ರೂಪಾ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Advertisement

ಪ್ರಕರಣದ ಸಂಬಂಧ ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಸತ್ಯನಾರಾಯಣರಾವ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ.ಆಲೋಕ್‌ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಅವರು ಮನವಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠದ ಮುಂದೆ ಹಾಜರಾದ ಡಿ.ರೂಪಾ ಪರ ವಕೀಲರು, ಅರ್ಜಿಯಲ್ಲಿ ತಮ್ಮ ಕಕ್ಷಿದಾರರ ವಿರುದ್ಧ ಆರೋಪ ಮಾಡಲಾಗಿದೆ. ಆದರೆ, ಅವರನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹಾಗಾಗಿ, ಅವರನ್ನು ಪ್ರತಿವಾದಿಯನ್ನಾಗಿ ಪರಿಗಣಿಸಲು ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು. ಇದೇ ವೇಳೆ ಸತ್ಯನಾರಾಯಣರಾವ್‌ ವಿರುದ್ಧ ಸದ್ಯ ಯಾವುದೇ ಕ್ರಮ ಜರುಗಿಸದಂತೆ ಎಸಿಬಿಗೆ ನಿರ್ದೇಶಿಸಿ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ವಿಸ್ತರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next