Advertisement

ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ

12:38 PM Sep 15, 2020 | Suhan S |

ಚಾಮರಾಜನಗರ: ಪ್ರತಿ ವ್ಯಕ್ತಿಗೂ ಶಿಕ್ಷಣ ಮುಖ್ಯವಾಗಿದ್ದು, ಹೆಚ್ಚು ಜನರು ಸೇರುವಂತಹ ಸ್ಥಳಗಳಲ್ಲಿ ಸಾಕ್ಷರತೆಯ ಮಹತ್ವದ ಬಗ್ಗೆ ಅರಿವು ಮೂಡಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಪಂ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಕ್ಷರತಾ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವ, ಅವಶ್ಯಕತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮಾಡಿಸಿಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರನ್ನಾಗಿ ಮಾಡಬೇಕು. ಹೆಚ್ಚು ಶಿಕ್ಷಿತರಾಗುವುದರಿಂದ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ಸಾಧಿಸಲು ಸಹಾಯವಾಗುತ್ತದೆ.

ಅನಕ್ಷರಸ್ಥರೆಲ್ಲರೂ ವಿದ್ಯೆ ಕಲಿತು ಸಾಕ್ಷರಸ್ಥರಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದುಕೋರಿದರು.ವಿಶೇಷವಾಗಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗದಂತೆ ಸಾಕ್ಷರರನ್ನಾಗಿಸುವ ಹೆಚ್ಚಿನ ಕಾರ್ಯ ಕ್ರಮಗಳನ್ನು ರೂಪಿಸಬೇಕು. ಪ್ರತಿ ಮನೆ ಮನೆಗೂ ಅಕ್ಷರ ಕಲಿಸುವ ಕೆಲಸ ಆಗಬೇಕು ಎಂದರು..

ಜಿಲ್ಲೆಯಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಳವಾಗಲು ಕೈಜೋಡಿಸ ಬೇಕೆಂದರು. ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಎನ್‌. ವಿ. ಸ್ವಾಮಿ, ತಾಲೂಕು ಸಂಯೋಜಕರಾದ ಪಿ. ಸೋಮಪ್ಪ, ಸಿ. ಮಂಜುನಾಥ್‌, ವೈ. ಗಿರಿರಾಜ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next