Advertisement

ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ

05:38 PM Sep 11, 2024 | Team Udayavani |

ಉದಯವಾಣಿ ಸಮಾಚಾರ
ರಾಣಿಬೆನ್ನೂರ: ಕವಿಗಳಲ್ಲಿ ತಾಳ್ಮೆ ಅಗತ್ಯ, ಕವಿಗಳು ಸಾರ್ವತ್ರಿಕವಾಗಿರಬೇಕು. ಸಾಹಿತ್ಯ ಸಮಾಜಮುಖಿ ಚಿಂತನೆಗಳನ್ನು
ಪ್ರತಿಪಾದಿಸಿದಾಗ ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯ. ಅಸಹನೆಗಳನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಪ್ರಾಧ್ಯಾಪಕ ಡಾ| ಎಂ.ಈ. ಶಿವಕುಮಾರ ಹೊನ್ನಾಳಿ ಹೇಳಿದರು.

Advertisement

ನಗರದ ಕನ್ನಡ ಸಾಹಿತ್ಯ ಪರಿಷತ್‌ ಭವನದಲ್ಲಿ ಜಿಲ್ಲಾಮಟ್ಟದ ಕವಿಗೋಷ್ಠಿಯಲ್ಲಿ ಸ್ಥಳಿಯ ಕವಿ ದೇವರಾಜ್‌ ಹುಣಸಿಕಟ್ಟಿ ಅವರ
ಹಕೀಮನೊಬ್ಬನ ತಕರಾರು ಎಂಬ ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಾಹಿತ್ಯ ಕ್ಷೇತ್ರದ ಮೂಲಕ
ಸಮಾಜದ ಓರೆಕೋರೆಗಳನ್ನು ತಿದ್ದುವ ಶಕ್ತಿ ಬರುತ್ತದೆ. ಇಂತಹ ಸಾಧ್ಯತೆಗಳನ್ನು ಕವಿ ದೇವರಾಜ ತಮ್ಮ ಕೃತಿಯ ಕವನಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇಂದಿನ ಬರಹಗಾರರು, ಸಾಹಿತಿಗಳು ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ಕವಿತೆಗಳಲ್ಲಿ ನಿರಂತರ ಕೃಷಿ ಇರಬೇಕು. ಮೊನಚು, ನೇರ, ದಿಟ್ಟತನ ಇರಬೇಕು. ಇಂದಿನ ಯುವ ಸಾಹಿತಿಗಳಲ್ಲಿ ಇಂದು ಸಾಮಾಜಿಕ ಬದ್ಧತೆ ಕ್ಷೀಣಿಸುತ್ತಿದೆ ಎಂದು ವಿಷಾದಿಸಿದ ಅವರು, ಸಮಾಜ ಮುಖಿಯಾಗಿರಬೇಕಾದ ಇಂದಿನ ಸಾಹಿತಿಗಳಲ್ಲಿ ಸಾಮಾಜಿಕ ಬದ್ಧತೆ ಕಾಣದಾಗಿದೆ. ಕೆಟ್ಟಿರುವ ಸಮಾಜದ ವ್ಯವಸ್ಥೆ ಬಗ್ಗೆ ಮಾತನಾಡುವಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದರು.

ಯಾವುದೇ ಕವನ, ಸಾಹಿತ್ಯವಾಗಲಿ ಸ್ವಯಂಪ್ರೇರಿತರಾಗಿ ಅಭ್ಯಾಸ ಮಾಡುವುದರಿಂದ ಮತ್ತು ಅನುಭವದಿಂದ ಮಾತ್ರ ಬರಲು ಸಾಧ್ಯ. ಕಾವ್ಯ ಮತ್ತು ಸಾಹಿತ್ಯಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಬಹುದು. ಕವಿಗಳನ್ನು, ಲೇಖಕರನ್ನು ಓದಿನಲ್ಲಿ ತೊಡಗಿಸುವುದು. ಇಂತಹ ಕವಿಗೋಷ್ಠಿಗಳ ಉದ್ದೇಶವಾಗಿದೆ. ಆಧುನಿಕ ಯುಗದಲ್ಲಿ ಎಲ್ಲರೂ ಆಕರ್ಷಣೆಗೆ ಒಳಗಾಗಿರುವುದರಿಂದ ಕವನಗಳನ್ನು ಕೇಳುವವರ ಸಂಖ್ಯೆಯೇ ಕಡಿಮೆಯಾಗಿದೆ ಎಂದು ವಿಷಾದಿಸಿದರು.

ಸಾಹಿತಿ ದೀಪಾ ಗೋನಾಳ ಕೃತಿ ಪರಿಚಯಿಸಿದರು. ಜಿಲ್ಲಾಮಟ್ಟದ ಕವಿಗೋಷ್ಠಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 20ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿ ಎಲ್ಲರ ಗಮನ ಸೆಳೆದರು. ನಾಗರತ್ನ ಚಲವಾದಿ, ಪೂರ್ಣಿಮಾ, ಗೌತಮ್‌,
ಪ್ರೀತಮ್ಮ ಸಾವಕ್ಕನವರ, ಅಭಿಲಾಷ್‌ ಬ್ಯಾಡಗಿ, ಬಸವರಾಜ ಸಾವಕ್ಕನವರ, ಶಕುಂತಲಾ ಎಫ್‌. ಕೆ., ಸೋಮಣ್ಣ ಲಮಾಣಿ, ಕಸಾಪ ನಿಕಟಪೂರ್ವ ಅಧ್ಯಕ್ಷ ವೀರೇಶ ಜಂಬಗಿ, ದೇವರಾಜ ಹುಣಸಿಕಟ್ಟಿ, ಮಾರುತಿ ತಳವಾರ, ದಾಕ್ಷಾಯಣಿ ಉದಗಟ್ಟಿ, ನಾಮದೇವ ಕಾಗದಗಾರ ಮುಂತಾದವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next