Advertisement

ಸಾಹಿತಿ, ಕಲಾವಿದರ ಜನ್ಮ ಶತಮಾನೋತ್ಸವ

10:13 AM Jan 19, 2018 | Team Udayavani |

ಮಹಾನಗರ: ಯಕ್ಷಗಾನ ಕ್ಷೇತ್ರದ ಸವ್ಯಸಾಚಿಯಾಗಿ ಮೆರೆದವರು ದಿ| ಅಳಿಕೆ ರಾಮಯ್ಯ ರೈ ಎಂದು ಪ್ರಾಧ್ಯಾಪಕ, ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಹಿತಿ, ಕಲಾವಿದರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಸರಣಿಯ ಪ್ರಥಮ ಕಾರ್ಯಕ್ರಮವಾಗಿ ಅಕಾಡೆಮಿಯ ಸಿರಿಚಾವಡಿಯಲ್ಲಿ ಶುಕ್ರವಾರ ನಡೆದ ಯಕ್ಷಗಾನ ದಿಗ್ಗಜ ಅಳಿಕೆ ರಾಮಯ್ಯ ರೈ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

Advertisement

64 ವರ್ಷಗಳ ಯಕ್ಷಸೇವೆ
ತನ್ನ 11ನೇ ವಯಸ್ಸಿನಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಕಾಲಿರಿಸಿದ ಅಳಿಕೆ ರಾಮಯ್ಯ ರೈ ಅವರು ತುಳುನಾಡಿನ ಪ್ರಮುಖ ಯಕ್ಷಗಾನ ಮೇಳಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದವರು. 64 ವರ್ಷಗಳ ಯಕ್ಷಸೇವೆಯಲ್ಲಿ 3 ತಲೆಮಾರುಗಳ ಕಲಾವಿದರು ಹಾಗೂ ಮೇಳಗಳ ಯಜಮಾನರ ಜತೆಯಲ್ಲಿ ದುಡಿದವರು ಎಂದು ಹೇಳಿದರು.

ಯಕ್ಷಗಾನ, ನಾಟಕ ಕ್ಷೇತ್ರದ ಹಿರಿಯರಿಗೆ ಗೌರವ
ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ತುಳು ಭಾಷಾ ಬೆಳವಣಿಗೆಗೆ ಯಕ್ಷಗಾನ ಮತ್ತು ತುಳು ರಂಗಭೂಮಿಯವರು ವಿಶೇಷ ಕೊಡುಗೆ ನೀಡಿದ್ದು ಈ ನಿಟ್ಟಿನಲ್ಲಿ ಯಕ್ಷಗಾನ, ನಾಟಕ ಕ್ಷೇತ್ರದ ಹಿರಿಯರನ್ನು ಅಕಾಡೆಮಿ ವತಿಯಿಂದ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಉದ್ಘಾಟನೆ
ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಶಿಲೇಖಾ ಬಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿಚಾರ ಮಂಡನೆ
ಮಹಿಳೆ ಮತ್ತು ಯಕ್ಷಗಾನ ವಿಷಯದ ಬಗ್ಗೆ ದಿಲ್ಲಿಯ ಯಕ್ಷ ಮಂಜೂಷದ ನಿರ್ದೇಶಕಿ ವಿದ್ಯಾ ಕೋಳ್ಯೂರು ಅವರು ವಿಚಾರ ಮಂಡಿಸಿದರು. ಅಳಿಕೆ ರಾಮಯ್ಯ ರೈ ಅವರ ಪುತ್ರ, ಬ್ಯಾಂಕ್‌ ಆಫ್‌ ಬರೋಡಾದ ನಿವೃತ್ತ ಮ್ಯಾನೇಜರ್‌ ಬಾಲಕೃಷ್ಣ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

Advertisement

ಕಾರ್ಯಕ್ರಮದ ಸಂಚಾಲಕ ನಿರಂಜನ ರೈ ಮಠಂತಬೆಟ್ಟು ಸ್ವಾಗತಿಸಿದರು. ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ಪ್ರಾಸ್ತಾವಿಕವಾಗಿ ಕಲಾವಿದರ ಸಂಸ್ಮರಣೆ ಕಾರ್ಯಕ್ರಮದ ಆಶಯವನ್ನು ವ್ಯಕ್ತಪಡಿಸಿದರು. ಅಕಾಡೆಮಿ ಸದಸ್ಯ ಗೋಪಾಲ್‌ ಅಂಚನ್‌ ವಂದಿಸಿ, ಸುಧಾ ನಾಗೇಶ್‌ ಕಾರ್ಯಕ್ರಮ ನಿರೂಪಿಸಿದರು.

ತಾಳಮದ್ದಳೆ
ಸಭಾ ಕಾರ್ಯಕ್ರಮದ ಬಳಿಕ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಸದಸ್ಯರಿಂದ ಡಾ| ದಿನಕರ ಎಸ್‌. ಪಚ್ಚನಾಡಿ ಅವರ ನಿರ್ದೇಶನದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ತಾಳಮದ್ದಳೆ ಕೂಟ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next