ಮಂಗಳೂರು: ನಗರದ ನಾಗುರಿಯಲ್ಲಿ ನವೆಂಬರ್ 19 ರಂದು ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟದ ಜವಾಬ್ದಾರಿಯನ್ನು ಹೆಚ್ಚು ಪ್ರಚಲಿತವಿಲ್ಲದ ಉಗ್ರ ಸಂಘಟನೆಯಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (IRC) ವಹಿಸಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ವರದಿಯನ್ನು ಪೊಲೀಸರು ಇನ್ನಷ್ಟೇ ಖಚಿತಪಡಿಸಬೇಕಿದೆ
ಡಾರ್ಕ್ ವೆಬ್ ಮೂಲಕ ಸಾಮಾಜಿಕ ತಾಣದಲ್ಲಿ , ಅರೇಬಿಕ್ ಭಾಷೆಯಲ್ಲಿ ಐಆರ್ ಸಿ ತಾನೇ ಸ್ಫೋಟ ಮಾಡಿದ್ದು ಎಂದು ಹಾಕಲಾಗಿರುವ ಪೋಸ್ಟ್‌ನಲ್ಲಿ ಮೊಹಮ್ಮದ್ ಶಾರಿಕ್ ಕದ್ರಿಯಲ್ಲಿರುವ ಹಿಂದೂ ದೇವಾಲಯದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದ ಎಂದು ಹೇಳಿಕೊಳ್ಳಲಾಗಿದೆ. ಆದರೆ, ಉನ್ನತ ಪೊಲೀಸ್ ಅಧಿಕಾರಿಗಳು ಈ ಮಾಹಿತಿಯ ಮೂಲವನ್ನು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಸಂದೇಶ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಾಗಿದೆ.
ನವೆಂಬರ್ 19 ರಂದು ಮಂಗಳೂರಿನಲ್ಲಿ ಮೊಹಮ್ಮದ್ ಶಾರಿಕ್ ಕುಕ್ಕರ್‌ನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸ್ಫೋಟ ನಡೆದಿತ್ತು. ತನಿಖೆ ನಡೆಸಿದ ಪೊಲೀಸರು ಸ್ಫೋಟವನ್ನು ಭಯೋತ್ಪಾದಕ ಕೃತ್ಯ ಎಂದು ಕರೆದು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ.