Advertisement
ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಹೊರವ ಲಯದ ಬಿ.ಸಿ.ಪಾಟೀಲ ನಗರದಲ್ಲಿ ಕೌರವ ಶಿಕ್ಷಣ ಸಂಸ್ಥೆಯಿಂದ ನೂತನವಾಗಿ ನಿರ್ಮಿಸಿರುವ ಜಗಜ್ಯೋತಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
Related Articles
Advertisement
ಇಂದು ಅದರಡಿಯಲ್ಲಿ ಈ ಭಾಗದ ಜನತೆಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಜಗಜ್ಯೋತಿ ಸಾಂಸ್ಕೃತಿಕ ಕೇಂದ್ರ ನಿರ್ಮಿಸಲಾಗಿದೆ ಎಂದರು. ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ವಿರೂಪಾಕ್ಷ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣ ಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದ ಪೀಠಾಧಿಪತಿ ಶ್ರೀಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಶಾಸಕ ಅರುಣಕುಮಾರ ಪೂಜಾರ, ಮಾಜಿ ಶಾಸಕ ಸುರೇಶಗೌಡ ಪಾಟೀಲ, ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ, ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ಜಿ.ಶಿವನಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್.ಪಾಟೀಲ, ಆರ್.ಎನ್.ಗಂಗೋಳ, ಕುಸುಮಾ ದೊಡ್ಡಗೌಡ ಪಾಟೀಲ, ರವಿಶಂಕರ ಬಾಳಿಕಾಯಿ, ಲಿಂಗರಾಜ ಚಪ್ಪರದಳ್ಳಿ, ಜಿ.ಪಿ.ಪ್ರಕಾಶ, ಎನ್.ಎಂ.ಈಟೇರ, ರಾಜು ಹುಚಗೊಂಡರ, ಅಶೋಕ ಪಾಟೀಲ, ವನಜಾ ಪಾಟೀಲ, ಸೃಷ್ಠಿ ಸುಜಯ್, ಸೌಮ್ಯ ಪ್ರತಾಪ್, ಸುರೇಶ ಮಾರ್ಗದ, ಸಿದ್ದಪ್ಪ, ಎಸ್. ವೀರಭದ್ರಯ್ಯ ಇನ್ನಿತರರು ಭಾಗವಹಿಸಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಕೌರವ ಶಿಕ್ಷಣ ಸಂಸ್ಥೆ ವತಿಯಿಂದ ನಿರ್ಮಿಸಿರುವ ಸಾಂಸ್ಕೃತಿಕ ಭವನಕ್ಕೆ ಜಗಜ್ಯೋತಿ ಎಂದು ಹೆಸರಿಟ್ಟಿರುವುದು ಅಭಿನಂದನಾರ್ಹವಾಗಿದೆ. ಅವರು ರಂಗಭೂಮಿ, ಚಲನಚಿತ್ರ, ಪೊಲೀಸ್ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಜನರ ಒಲವು ಸಂಪಾದಿಸಿ ಯಶಸ್ಸು ಪಡೆದುಕೊಂಡಿದ್ದಾರೆ. ಕೃಷಿ ಸಚಿವರಾಗಿ ರೈತರೊಂದಿಗೆ ಆತ್ಮೀಯ ಸಂಬಂಧ ಹೊಂದಿ ಅವರ ನೋವು-ನಲಿವುಗಳನ್ನು ಅರ್ಥೈಯಿಸಿಕೊಂಡು ಸ್ಪಂದನೆ ಮಾಡುತ್ತಿದ್ದಾರೆ.
ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ