ಚಂಡೀಗಢ್: ಲಿವ್ ಇನ್ ರಿಲೇಶನ್ ಶಿಪ್ ಅನ್ನು ಸಾಮಾಜಿಕವಾಗಿ ಹಾಗೂ ನೈತಿಕವಾಗಿ ಒಪ್ಪಲು ಸಾಧ್ಯವಿಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ. ಮನೆಬಿಟ್ಟು ಓಡಿಹೋದ ಜೋಡಿಯೊಂದು ತಮ್ಮ ಪಾಲಕರಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಅಭಿಪ್ರಾಯ ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಒಂದು ತಿಂಗಳ ಕಾಲ ಲಾಕ್ ಡೌನ್ ಮಾಡುವುದು ಅನಿವಾರ್ಯ: ಕುಮಾರಸ್ವಾಮಿ
ಗುಲ್ಜಾ ಕುಮಾರಿ (19ವರ್ಷ) ಮತ್ತು ಗುರ್ವಿಂದರ್ ಸಿಂಗ್ (22ವರ್ಷ) ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಾವಿಬ್ಬರೂ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದು, ಶೀಘ್ರವಾಗಿ ಮದುವೆಯಾಗುವುದಾಗಿ ತಿಳಿಸಿದ್ದರು. ತಮಗೆ ಗುಲ್ಜಾ ಕುಮಾರಿ ಪೋಷಕರಿಂದ ಜೀವಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಮನವಿ ಮಾಡಿಕೊಂಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಪಂಜಾಬ್ ಹರ್ಯಾಣ ಹೈಕೋರ್ಟ್ ಪೀಠ, ಲಿವ್ ಇನ್ ರಿಲೇಶನ್ ಶಿಪ್ ಸಂಬಂಧವನ್ನು ಸಾಮಾಜಿಕ ಮತ್ತು ನೈತಿಕವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರಕ್ಷಣೆ ನೀಡಬೇಕೆಂದು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿ ಜಸ್ಟೀಸ್ ಎಚ್ ಎಸ್ ಮದನ್ ಅರ್ಜಿಯನ್ನು ವಜಾಗೊಳಿಸಿದ್ದರು.
ಅರ್ಜಿದಾರರ ಪರ ವಕೀಲರಾದ ಜೆಎಸ್ ಠಾಕೂರ್ ಅವರು, ಸಿಂಗ್ ಮತ್ತು ಕುಮಾರಿ ಅವರು ಟಾರ್ನ್ ಮತ್ತು ತಾರನ್ ಜಿಲ್ಲೆಯಲ್ಲಿ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದಾರೆ. ಕುಮಾರಿ ಅವರ ಪೋಷಕರು ಲುಧಿಯಾನಾದಲ್ಲಿದ್ದು, ಇಬ್ಬರ ಸಂಬಂಧಕ್ಕೆ ಒಪ್ಪಿಗೆ ನೀಡುತ್ತಿಲ್ಲ ಎಂದು ವಾದಿಸಿದ್ದರು. ಆದರೆ ಕೋರ್ಟ್ ವಾದಕ್ಕೆ ಮನ್ನಣೆ ನೀಡದೆ ಅರ್ಜಿಯನ್ನು ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.