Advertisement

‘ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳಬೇಕು’

01:03 PM Aug 17, 2018 | Team Udayavani |

ಪುತ್ತೂರು: ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ. ಇದು ನಮ್ಮ ಜವಾಬ್ದಾರಿ. ಬಲಿದಾನ ಮಾಡಿದ ದೇಶಭಕ್ತ ಹೋರಾಟಗಾರರನ್ನೆಲ್ಲ ಸ್ಮರಿಸಿ ಅವರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಪುತ್ತೂರು ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Advertisement

ಯೋಧರನ್ನು ಸಮ್ಮಾನಿಸಲಾಯಿತು. ಸಮ್ಮಾನಿತ ಯೋಧರ ಪರವಾಗಿ ಸುರೇಶ್‌ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯ ಸುರೇಶ್‌ ಶೆಟ್ಟಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಸ್ಪರ್ಧೆಗಳ ವಿಜೇತರನ್ನು ಗೌರವಿಸಲಾಯಿತು. ವಿಜೇತರ ಪಟ್ಟಿಯನ್ನು ಉಪನ್ಯಾಸಕರಾದ ಗೀತಾ ಹಾಗೂ ದುರ್ಗಾಪರಮೇಶ್ವರ್‌ ವಾಚಿಸಿದರು.

ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಪ್ರಾಚಾರ್ಯೆ ರಾಜಶ್ರೀ ನಟ್ಟೋಜ, ವಸತಿಯುತ ಪ.ಪೂ. ವಿದ್ಯಾಲಯದ ಪ್ರಾಚಾರ್ಯ ಶಂಕರ ನಾರಾಯಣ ಭಟ್‌, ಪ್ರಾಚಾರ್ಯೆ ಸುಜನಿ ಬೋರ್ಕರ್‌, ವೆಂಕಟೇಶ್‌ ಭಟ್‌ ಉಪಸ್ಥಿತರಿದ್ದರು. ಧ್ವಜಾರೋಹಣದ ಅನಂತರ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ವಿದ್ಯಾರ್ಥಿನಿ ಸಾಯಿಲಕ್ಷ್ಮೀ ಹಾಗೂ ಬಳಗದವರು ಪ್ರಾರ್ಥಿಸಿದರು. ವಿದ್ಯಾರ್ಥಿ ನಾಯಕ ಧೀರಜ್‌ ಸ್ವಾಗತಿಸಿ, ಅಂಬಿಕಾ ವಸತಿಯುತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ಗೌತಮಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next