ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡನೆ ಆರಂಭಗೊಂಡಿದೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಬೊಮ್ಮಾಯಿ ಅವರು ಬೆಳಗ್ಗೆ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ಇದನ್ನೂ ಓದಿ:ಯುದ್ಧ ಭೀತಿ ನಡುವೆ 12 ಕಿ.ಮೀ. ನಡೆದು ಹಾಸೆಲ್ ಸೇರಿದ ಸಾವಿರಾರು ವಿದ್ಯಾರ್ಥಿಗಳು
ಎರಡು ತಿಂಗಳ ಕಾಲ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಂದ ಮಾಹಿತಿ ಪಡೆದು ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಸಿದ್ದಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ 2.60 ಲಕ್ಷ ಕೋಟಿ ರೂಪಾಯಿ ಬಜೆಟ್ ಗಾತ್ರ ನಿಗದಿಯಾಗುವ ಸಾಧ್ಯತೆ ಇದೆ. ಕೃಷಿ, ಮೂಲ ಸೌಕರ್ಯಕ್ಕೆ ಆದ್ಯತೆ ಲಭಿಸಲಿದ್ದು, ಸಿಎಂ ಆದ ಆರಂಭದಲ್ಲಿ ಬೊಮ್ಮಾಯಿ ಘೋಷಣೆ ಮಾಡಿದ್ದ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಣೆ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ. ರಾಜ್ಯ ಬಜೆಟ್ ನ ಪ್ರಮುಖ ಮುಖ್ಯಾಂಶಗಳ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…