Advertisement

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

07:59 AM Sep 17, 2024 | Team Udayavani |

ಮಂಗಳೂರು: ತನ್ನ ಸಂಬಂಧಿಯೋರ್ವರಿಗೆ ಲಿವರ್‌ (ಯಕೃತ್ತು) ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಅವರು ದಿಢೀರ್‌ ಅಸ್ಪಸ್ಥಗೊಂಡು ಮೃತಪಟ್ಟಿದ್ದಾರೆ.

Advertisement

ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಅರ್ಚನಾ ದಿಢೀರ್‌ ಅಸ್ವಸ್ಥಗೊಂಡಿದ್ದು, ಸೆ.15ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲಿವರ್‌ ಕಸಿ ಮಾಡಿಸಿಕೊಂಡಿರುವ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಅವರು ಬಳಿಕ ನಗರದ ಹೊರವಲಯದ ಮಣೇಲ್‌ ಶ್ರೀನಿವಾಸ ನಾಯಕ್‌ ಎಂಬಿಎ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಅರ್ಚನಾ ಅವರು ಪತಿ ಸಿಎ ಚೇತನ್‌ ಕುಮಾರ್‌ ಹಾಗೂ ನಾಲ್ಕು ವರ್ಷದ ಪುತ್ರನನ್ನು ಅಗಲಿದ್ದಾರೆ. ಅರ್ಚನಾ ಅವರ ಸಾವಿಗೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಇವರ ಸಾವು ಎಲ್ಲರ ಕಣ್ಣನ್ನೂ ಒದ್ದೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next