Advertisement

ಅಸಮಾಧಾನದ ಅಲೆ: ರಾಜೀನಾಮೆ ನೀಡಿದ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್

06:15 PM Oct 20, 2022 | Team Udayavani |

ಲಂಡನ್ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬ್ರಿಟನ್ ಪ್ರಧಾನಮಂತ್ರಿ ಹುದ್ದೆಗೆ ಲಿಜ್ ಟ್ರಸ್ ಗುರುವಾರ ರಾಜೀನಾಮೆ ನೀಡಿದ್ದಾರೆ.

Advertisement

ಲಿಜ್‌ ಟ್ರಸ್‌ ಅವರ ಆಡಳಿತದ ಬಗ್ಗೆ ಅವರ ಕನ್ಸರ್ವೇಟಿವ್‌ ಪಕ್ಷದಲ್ಲಿ ಅಸಮಾಧಾನದ ಅಲೆಗಳು ಎದ್ದಿದ್ದವು. ಹಲವು ರಾಜಕೀಯ ಬೆಳವಣಿಗೆಗಳ ಬಳಿಕ ಈಗ ಪ್ರಧಾನಿ ಹುದ್ದೆ ಮಾಜಿ ವಿತ್ತ ಸಚಿವ ರಿಷಿ ಸುನಕ್‌ ಅವರಿಗೆ ಒಲಿಯುವ ಸಾಧ್ಯತೆಗಳು ದಟ್ಟವಾಗಿವೆ.

ಅಧಿಕಾರ ವಹಿಸಿಕೊಂಡ 45 ದಿನಗಳಲ್ಲೇ ಟ್ರಸ್ ಆಂತರಿಕ ಕಚ್ಚಾಟದಿಂದಾಗಿ ರಾಜೀನಾಮೆ ನೀಡಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Advertisement

Udayavani is now on Telegram. Click here to join our channel and stay updated with the latest news.

Next