ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ದೇಶದ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಇಂದು (ನವೆಂಬರ್ 08) 95ನೇ ವರ್ಷಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ:ನನ್ನ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ: ಕಾಯಿಲೆ ಬಗ್ಗೆ ಮೌನ ಮುರಿದ ಸಮಂತಾ
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮಾಸ್ಕೋ ಪ್ರವಾಸದಲ್ಲಿದ್ದು, ಎಲ್.ಕೆ.ಅಡ್ವಾಣಿ ಅವರು ದೇಶಕ್ಕೆ ನೀಡಿರುವ ಸೇವೆ ಯಾವತ್ತೂ ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.
“ಗೌರವಾನ್ವಿತ ಎಲ್.ಕೆ.ಅಡ್ವಾಣಿಜೀಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಕಠಿಣ ಪರಿಶ್ರಮದ ಮೂಲಕ ದೇಶಾದ್ಯಂತ ಪಕ್ಷವನ್ನು ಸಂಘಟಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು, ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ದೇವರು ಅವರಿಗೆ ಆಯುರಾರೋಗ್ಯ, ದೀರ್ಘಾಯುಷ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ” ರಾಜನಾಥ್ ಸಿಂಗ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಎಲ್.ಕೆ.ಅಡ್ವಾಣಿ 95ನೇ ಹುಟ್ಟುಹಬ್ಬಕ್ಕೆ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ರಾಜೀವ್ ಚಂದ್ರಶೇಖರ್, ಕಿರಣ್ ರಿಜಿಜು ಸೇರಿದಂತೆ ಬಿಜೆಪಿ ಹಲವು ಮುಖಂಡರು ಈ ಸಂದರ್ಭದಲ್ಲಿ ಶುಭಾಶಯ ಕೋರಿದ್ದಾರೆ.