Advertisement

Bharat Ratna;ನಿವಾಸದಲ್ಲೇ ಅಡ್ವಾಣಿಯವರಿಗೆ ಅತ್ಯುನ್ನತ ಪ್ರಶಸ್ತಿ ಪ್ರದಾನ

04:45 PM Mar 31, 2024 | Team Udayavani |

ಹೊಸದಿಲ್ಲಿ:ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾನುವಾರ ದೆಹಲಿಯ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನವನ್ನು ಪ್ರದಾನ ಮಾಡಿದರು.

Advertisement

ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ರಕ್ಷಣ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ (96) ಅವರು ಜೂನ್ 2002 ರಿಂದ ಮೇ 2004 ರವರೆಗೆ ಉಪಪ್ರಧಾನಿಯಾಗಿ ಮತ್ತು ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ಅಧ್ಯಕ್ಷರಾಗಿದ್ದರು.

ಶನಿವಾರ (ಮಾರ್ಚ್‌ 30) ರಂದು ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌, ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್‌, ಬಿಹಾರ ಮಾಜಿ ಸಿಎಂ ಕರ್ಪೂರಿ ಠಾಕೂರ್‌ ಹಾಗೂ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರದಾನ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next