Advertisement
ಈ ಮಾಹಿತಿಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದ್ದು ‘ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಕವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಅನುಕರಣೀಯ ಮತ್ತು ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಬರೆದುಕೊಂಡಿದ್ದಾರೆ.
Related Articles
ಲಾಲ್ ಕೃಷ್ಣ ಅಡ್ವಾಣಿ ತಮ್ಮ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಸ್ಥಾನಗಳನ್ನು ಅಲಂಕರಿಸಿಕೊಂಡಿದ್ದರು. 1977ರಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾದರು ಮತ್ತು 2002ರಲ್ಲಿ ಉಪಪ್ರಧಾನಿಯಾದರು. 2009ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲು ಅಡ್ವಾಣಿ ಅವರಿಗೆ ದೊಡ್ಡ ಹಿನ್ನಡೆಯಾಗಿತ್ತು. ಆ ಬಳಿಕ ಬಿಜೆಪಿಗೆ ಹೊಸ ಪೀಳಿಗೆಯ ಆಗಮನಕ್ಕೆ ದಾರಿ ಮಾಡಿಕೊಟ್ಟರು. ಇದಾದ ನಂತರ ಅವರ ರಾಜಕೀಯ ಚಟುವಟಿಕೆಗಳೂ ಕಡಿಮೆಯಾಗತೊಡಗಿತು. ಇಂದು ಬಿಜೆಪಿಯಲ್ಲಿ ಇರುವಂತಹ ಪ್ರಬಲ ಸ್ಥಾನಕ್ಕೆ ಅಡಿಪಾಯ ಹಾಕಿದವರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆಗೆ ಅಡ್ವಾಣಿ ಅವರ ಹೆಸರನ್ನು ತೆಗೆದುಕೊಳ್ಳಲಾಗುತ್ತದೆ.
Advertisement
ಇದನ್ನೂ ಓದಿ: Delhi Police: ಬೆಳ್ಳಂಬೆಳಗ್ಗೆ ಕೇಜ್ರಿವಾಲ್ ಮನೆಯ ಕದ ತಟ್ಟಿದ ಕ್ರೈಂ ಬ್ರಾಂಚ್ ತಂಡ