Advertisement

Ayodhya ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಗೈರು

10:43 AM Jan 22, 2024 | Team Udayavani |

ಅಯೋಧ್ಯಾ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು (ಜನವರಿ 22) ನೂತನ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ. ಚಳಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಅವರು ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅಡ್ವಾಣಿ ಅವರಿಗೆ 96 ವರ್ಷ. ಇಂತಹ ಪರಿಸ್ಥಿತಿಯಲ್ಲಿ ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Advertisement

ಆರೆಸ್ಸೆಸ್ ಅಧಿಕಾರಿಗಳಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಅಲೋಕ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಆಗಮಿಸಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅಡ್ವಾಣಿ ಅವರು ಇಂತಹ ಭವ್ಯ ಸಮಾರಂಭದಲ್ಲಿ ನೇರವಾಗಿ ಉಪಸ್ಥಿತರಿರುವ ಅವಕಾಶ ಸಿಕ್ಕಿದ್ದು ಅದೃಷ್ಟದ ಸಂಗತಿ ಎಂದು ಹೇಳಿದ್ದರು.

ದಿಲ್ಲಿ, ಉತ್ತರ ಪ್ರದೇಶದ ಭಾಗಗಳಲ್ಲಿ ವಿಪರೀತ ಚಳಿ ವಾತಾವರಣವಿರುವುದರಿಂದ ಆರೋಗ್ಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಇಂದು ರಾಮಮಂದಿರದಲ್ಲಿ ರಾಮ ಲಲ್ಲಾನ ಭವ್ಯವಾದ ‘ಪ್ರಾಣ ಪ್ರತಿಷ್ಠಾ’ಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ಅಯೋಧ್ಯೆಯನ್ನು ಹೂವುಗಳು ಮತ್ತು ಬೀದಿದೀಪಗಳು ಮತ್ತು ಭಗವಾನ್ ರಾಮನ ಪೋಸ್ಟರ್‌ಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ‘ಪ್ರಾಣ ಪ್ರತಿಷ್ಠಾ’ ವಿಧಿವಿಧಾನಗಳಿಗೆ ಚಾಲನೆ ನೀಡಲಿದ್ದಾರೆ. ಬಾಂಬ್ ನಿಗ್ರಹ ದಳ ಮತ್ತು ಸ್ನೈಪರ್‌ಗಳು ಸೇರಿದಂತೆ 13,000 ಪಡೆಗಳೊಂದಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎನ್‌ಡಿಆರ್‌ಎಫ್‌ನ ತಂಡವೊಂದು ಅಯೋಧ್ಯೆಯ ರಾಮಮಂದಿರದ ಬಳಿ ಶಿಬಿರವನ್ನು ಸ್ಥಾಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next