Advertisement

Ayodhya ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ: VHP

09:35 AM Jan 11, 2024 | Team Udayavani |

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ನ ನಾಯಕರು ಹೇಳಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿದ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರು ಅಂದಿನ ಕಾಲದಲ್ಲಿ ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದರು ಎಂಬುದು ಗಮನಾರ್ಹ ವಿಚಾರ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಬರುವಂತೆ ಬಿಜೆಪಿ ಹಿರಿಯ ನಾಯಕರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ವಿಎಚ್‌ಪಿ ಡಿಸೆಂಬರ್‌ನಲ್ಲಿ ಆಹ್ವಾನಿಸಿತ್ತು. ಆದರೆ, ಆ ಸಮಯದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ಆರೋಗ್ಯದ ದೃಷ್ಟಿಯಿಂದ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಹೇಳಿತ್ತು.

ಆ ಬಳಿಕ ವಿಎಚ್‌ಪಿ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಎಲ್‌ಕೆ ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಅಲ್ಲದೆ ಅವರು ಈ ಶುಭ ಸಂದರ್ಭದಲ್ಲಿ ಭಾಗಿಯಾಗಬೇಕೆಂದು ಆಗ್ರಹಿಸಿದ್ದಾರೆ.

ಜನವರಿ 22 ರಂದು ಸೀಮಿತ ಆಹ್ವಾನಿತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ದೇಶಾದ್ಯಂತ ಸಾವಿರಾರು ಸಂತರನ್ನು ಆಹ್ವಾನಿಸಲಾಗಿದೆ. ಆಹ್ವಾನಿತರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿದ ಕಾರ್ಮಿಕರ ಕುಟುಂಬಗಳೂ ಸೇರಿದ್ದಾರೆ.

Advertisement

ಜನವರಿ 16 ರಿಂದ ಪ್ರಾರಂಭವಾಗುವ ಏಳು ದಿನಗಳ ಆಚರಣೆಗೆ ಅಯೋಧ್ಯೆಯಲ್ಲಿ ದೊಡ್ಡ ಪ್ರಮಾಣದ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಜನವರಿ 15ರೊಳಗೆ ಮಹಾಮಸ್ತಕಾಭಿಷೇಕದ ಸಿದ್ಧತೆಗಳು ಪೂರ್ಣಗೊಳ್ಳಲಿವೆ.

ಇದನ್ನೂ ಓದಿ: UK ಪ್ರಧಾನಿ ಭೇಟಿಯಾದ ಕೇಂದ್ರ ರಕ್ಷಣಾ ಸಚಿವ: ರಕ್ಷಣಾ-ವ್ಯಾಪಾರ ಸೇರಿ ಹಲವು ವಿಷಯಗಳು ಚರ್ಚೆ

Advertisement

Udayavani is now on Telegram. Click here to join our channel and stay updated with the latest news.

Next