Advertisement

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

01:16 AM Jun 25, 2024 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತ ಸ್ತರಕ್ಕೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚಿಸಿದ್ದಾರೆ ಎಂದರು.

ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿ ಸಲು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೇ ಟಿ.ಸಿ. ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಂಗನವಾಡಿ ಕೇಂದ್ರಗಳನ್ನು ಉನ್ನತ ಸ್ತರಕ್ಕೇರಿಸಿ, ಕನ್ನಡ ಹಾಗೂ ಇಂಗ್ಲಿಷ್‌ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದರು.

ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿ ದ್ದರೆ ಒಂದೂವರೆ ಸಾವಿರ ಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿ¨ªಾರೆ. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ
-ಲಕ್ಷ್ಮೀ ಹೆಬ್ಬಾಳ್ಕರ್‌,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

Advertisement
Advertisement

Udayavani is now on Telegram. Click here to join our channel and stay updated with the latest news.

Next