Advertisement
ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ಈ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ ಐದು ಸಾವಿರಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಯನ್ನೂ ತೆರೆಯುವ ಪ್ರಸ್ತಾಪ ಸಿದ್ಧಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ
ಸಚಿವ ತನ್ವೀರ್ ಸೇಠ್ ಈ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದು ಈ ಬಗ್ಗೆ ಪ್ರಸ್ತಾಪ ಸಿದ್ಧಪಡಿಸಲಾಗಿದೆ.
ಫೆಬ್ರವರಿಯಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲ “ಉದಯವಾಣಿ’ಗೆ ಸ್ಪಷ್ಟಪಡಿಸಿದೆ.
ಇಲ್ಲಿನ ಅಂಗನವಾಡಿ ಕಾರ್ಯಕರ್ತರು ಕಲಿಕೆ ಮತ್ತು ಐಸಿಡಿಎಸ್ ಎರಡೂ ವಿಭಾಗಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಬಿಸಿಯೂ
ಟಕ್ಕೆ ಅಂಗನವಾಡಿಗೆ ಬರುತ್ತಿದ್ದ ಆಹಾರವನ್ನೇ ಬಳಸಲಾಗುತ್ತದೆ. ಐದು ಸಾವಿರ ಪೂರ್ವ ಪ್ರಾಥಮಿಕ ಶಾಲೆ: ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಜತೆಗೆ ಪೂರ್ವ ಪ್ರಾಥಮಿಕ ಶಾಲೆ ಇಲ್ಲದೇ ಇರುವುದು ಇದಕ್ಕೆ ಕಾರಣ ಎಂದು ಶಿಕ್ಷಣ ತಜ್ಞರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಇದ್ದೇ ಇರುತ್ತದೆ. ಅಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ಸೇರಿದ ಮಕ್ಕಳು ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಮುಗಿಯುವ ತನಕ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಾರೆ. ಸರ್ಕಾರಿ ಶಾಲೆಯಲ್ಲಿ ಈ ವ್ಯವಸ್ಥೆ ಇಲ್ಲ. ಅಂಗನವಾಡಿ ಕೇಂದ್ರಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ವ್ಯಾಪ್ತಿಯೊಳಗೆ ಬರುತ್ತದೆ. ಅಂಗನವಾಡಿ ಸೇರಿದ ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಾರೆ ಎಂದು
ಊಹಿಸಲು ಸಾಧ್ಯವಿಲ್ಲ. ಹೀಗಾಗಿಯೇ ಅಂಗನವಾಡಿಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಹೀಗಾದಾಗ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ-ಯುಕೆಜಿ ವ್ಯಾಸಂಗ ಮಾಡಿದ ಮಕ್ಕಳು ಮುಂದೆ ಸಹಜವಾಗಿ ಅದೇ ಶಾಲೆಯಲ್ಲಿ ಒಂದನೇ ತರಗತಿಯಿಂದ ಕಲಿಯುತ್ತಿ ದ್ದಾರೆ. ಈ ಮೂಲಕ ಖಾಸಗಿ ಶಾಲೆಗಳತ್ತ ಮಕ್ಕಳನ್ನು ಸೇರಿಸು ವುದು ತಪ್ಪಿಸಬಹುದು ಎಂಬುದು ಸರ್ಕಾರದ ಉದ್ದೇಶ.
Related Articles
2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಸೆಕ್ಷನ್ 11ರ ಪ್ರಕಾರ ಮೂರು ವರ್ಷ ತುಂಬಿದ ಮಕ್ಕಳನ್ನು ಪ್ರಾಥಮಿಕ ಶಾಲೆಗೆ ಸಜ್ಜುಗೊಳಿಸಲು, ಪೂರ್ವ ಪ್ರಾಥಮಿಕ ತರಗತಿಗೆ ಸೇರಿಸುವು ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನೆಲ್ಲ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ-1(ಎಲ್‌ಕೆಜಿ), ಪೂರ್ವ ಪ್ರಾಥಮಿಕ ಶಾಲೆ -2 (ಯುಕೆಜಿ) ಆರಂಭಿಸಬೇಕು ಎಂದು ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ 2017ರಲ್ಲಿ ನೀಡಿದ ವರದಿಯಲ್ಲಿ ಶಿಫಾರಸು ಮಾಡಿದೆ. ಅದರಂತೆ ಸರ್ಕಾರ ಪೂರ್ವ ಪ್ರಾಥಮಿಕ ಶಾಲೆ ತೆರೆಯಲು ಮುಂದಾಗಿದೆ.
Advertisement
ಸರ್ಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ತೆರೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಎಲ್ಲೆಲ್ಲಿ ಸರ್ಕಾರಿ ಶಾಲಾವರಣದಲ್ಲಿ ಅಂಗನವಾಡಿ ಇದೆಯೋ ಅಲ್ಲೆಲ್ಲ ಹೊಂದಾಣಿಕೆಯ ಕಾರ್ಯ ನಡೆಯುತ್ತಿದೆ.ಡಾ.ಪಿ.ಸಿ.ಜಾಫರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ ರಾಜು ಖಾರ್ವಿ ಕೊಡೇರಿ