Advertisement

ಅಂಗನವಾಡಿಗಳಲ್ಲೇ ಎಲ್ಕೆಜಿ-ಯುಕೆಜಿ ಆರಂಭಿಸಲು ಒತ್ತಾಯ

02:56 PM May 29, 2019 | Team Udayavani |

ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಲ್ಲಿಯೇ ಸರಕಾರ ಎಲ್ಕೆಜಿ, ಯುಕೆಜಿ ಆರಂಭಿಸಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದಿಂದ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವರ್ಧನೆಗೊಳಿಸಬೇಕು. ಸರ್ಕಾರಿ ಶಾಲೆಗಳ ಬದಲಾಗಿ ಅಂಗನವಾಡಿಯಲ್ಲೇ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸಬೇಕೆಂದು ಒತ್ತಾಯಿಸಲಾಯಿತು.

ಅಂಗನವಾಡಿ ನೌಕರರು ಮೇ 30 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು ಅಂಗನವಾಡಿ ನೌಕರರು-ಸಹಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಇದೇ ಸಂದರ್ಭದಲ್ಲಿ ಕೋರಲಾಯಿತು. ಅಂಗನವಾಡಿ ಕಾರ್ಯಕರ್ತೆಯ ಹೋರಾಟಕ್ಕೆ ಸಿಐಟಿಯು ಸಂಘಟನೆ ಬೆಂಬಲ ಸೂಚಿಸಿದೆ. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಅಂಗನವಾಡಿ ನೌಕರರ ಸಂಘದ ಮುಖಂಡರಾದ ಮಾರುತಿ ಚಿಟಗಿ, ಚನ್ನಮ್ಮ ಹೆಬ್ಬಳ್ಳಿ, ರಜನಿ ಪಾಟೀಲ, ಅಕ್ಕಮ್ಮ ಕಬ್ಬೇರ, ಬಸಮ್ಮ ಕಳಸದ, ಕಲಾವತಿ ಪೀರಗಣ್ಣವರ, ಅಕ್ಕಮ್ಮ ಅಂಗಡಿ ಮೊದಲಾದವರಿದ್ದರು.

ನಾಳೆ ಬೆಂಗಳೂರಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದಿಂದ ಮೇ 30ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಐಟಿಯುಸಿ, ಸಿಐಟಿಯುಸಿ ಸಂಘಟನೆಗಳು ಜಂಟಿಯಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಧಾರವಾಡ ಜಿಲ್ಲೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ರೈಲು ಮೂಲಕ ಹೊರಟು ಬೆಂಗಳೂರು ತಲುಪಲಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಒಕ್ಕೂಟದ ಜಿಲ್ಲಾ ಸಮಿತಿ ಸಂಚಾಲಕ ಎನ್‌.ಎ.ಖಾಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next