Advertisement

ಅಯ್ಯೋ, ಅಯ್ಯೋ; ಕಾಲೇಜಿನಲ್ಲಿ ಎಬಿವಿಪಿ, ಎಸ್ಎಫ್ಐ ಮಾರಾಮಾರಿ!

04:27 PM Mar 18, 2017 | Sharanya Alva |

ತ್ರಿಶ್ಯೂರ್: ಎಬಿವಿಪಿ ಮತ್ತು ಎಸ್ಎಫ್ಐ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿ ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೇರಳದ ವರ್ಮಾ ಕಾಲೇಜಿನಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಎಸ್ಎಫ್ ಐಗೆ ವಿರುದ್ಧವಾಗಿ ಎಬಿವಿಪಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಹೊರಗಡೆಯಿಂದ ಬಂದ ಆರ್ಎಸ್ಎಸ್ ಕಾರ್ಯಕರ್ತರು ಕಾಲೇಜು ಕ್ಯಾಂಪಸ್ ಒಳಗೆ ನುಗ್ಗಿ ಎಸ್ಎಫ್ಐ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿ ವಿವರಿಸಿದೆ.

ಕಲ್ಲು ತೂರಾಟ, ದೊಣ್ಣೆಯಿಂದ ಸುಮಾರು ಒಂದು ಗಂಟೆಗಳ ಕಾಲ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಎಸ್ಎಫ್ ಐ ಆರೋಪದ ಪ್ರಕಾರ,  ಡಿ ಝೋನ್ ಟೂರ್ನ್ ಮೆಂಟ್ ತರಬೇತಿಗಾಗಿ ಆಗಮಿಸಿದ್ದ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರಂತೆ. ಎಬಿವಿಪಿ ದೂರಿನ ಪ್ರಕಾರ, ಸಭೆ ನಡೆಸುತ್ತಿದ್ದಾಗ ಎಸ್ಎಫ್ ಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವುದಾಗಿ ಹೇಳಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next