Advertisement
ಮಳೆಯೂ ಬಾರದೆ, ವಿದ್ಯುತ್ ಕೊರತೆ ಹೀಗೇ ಮುಂದುವರಿದರೆ ಅಧಿಕೃತವಾಗಿ ಲೋಡ್‌ಶೆಡ್ಡಿಂಗ್ ಮಾಡಬೇಕಾಗುತ್ತದೆ. ಆದರೆ, ಆ ಸಂದರ್ಭ ಸದ್ಯಕ್ಕಿಲ್ಲ. ಅಂತಹ ಸ್ಥಿತಿ ಬಾರದಿರಲಿ ಅಂತ ನಾವು ಕೂಡ ಪ್ರಾರ್ಥಿಸುತ್ತೇವೆ ಎಂದು ಅವರು ತಿಳಿಸಿದರು.
ಸ್ವತಃ ಇಂಧನ ಸಚಿವರು ಕರೆಂಟ್ ಕಣ್ಣಾಮುಚ್ಚಾಲೆ ಆಗುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಪ್ರಕೃತಿ, ಪರಿಸರ ಅಂತಹ ಅಸಹಾಯಕತೆ ತೋಡಿಕೊಂಡಿದ್ದಾರೆ. ಎಲ್ಲಿ ಹೆಚ್ಚುವರಿ ಇರುತ್ತದೆಯೋ ಅಲ್ಲಿಂದ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮಾಜಿ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ವಿದ್ಯುತ್ ಕಡಿತ ತುಂಬಾ ಆಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕೇವಲ ಮೂರು ತಾಸು ಮಾತ್ರ ರೈತರಿಗೆ ಕರೆಂಟ್ ಸಿಗುತ್ತಿದೆ. ನಗರ ಭಾಗದಲ್ಲೂ ಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ವಿದ್ಯುತ್ ಕಡಿತದಿಂದ ಹೂಡಿಕೆದಾರರಿಗೆ, ತಂತ್ರಜ್ಞಾನ ಕ್ಷೇತ್ರಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
Related Articles
ಬೆಂಗಳೂರು: ಬೇಡಿಕೆಗೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರ, ದುಬಾರಿ ಬೆಲೆ ತೆತ್ತು ವಿದ್ಯುತ್ ಖರೀದಿಸಿದರೂ ಕತ್ತಲೆ ಕರ್ನಾಟಕದ ಭಾಗ್ಯವನ್ನು ನೀಡುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಿಂದೆ ನಮ್ಮ ಸರಕಾರ ಇದ್ದಾಗ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದಿಸಿ ಗ್ರಿಡ್‌ಗೆ ನೀಡುವಷ್ಟು ಸಾಮರ್ಥ್ಯವಿತ್ತು. ಇದೀಗ ಬೇಡಿಕೆಗೆ ತಕ್ಕಷ್ಟು ಉತ್ಪಾದನೆಯೂ ಆಗುತ್ತಿಲ್ಲ, ಬೇಡಿಕೆ ಹಾಗೂ ಪೂರೈಕೆ ನಡುವೆಯೂ ಸಾಕಷ್ಟು ವ್ಯತ್ಯಾಸವಿದೆ ಎಂದರು.
Advertisement