Advertisement
ಹೌದು. ಆಶ್ಚರ್ಯ ಎನ್ನಿಸುವ ಇಂತಹದ್ದೊಂದು ಪ್ರಕರಣ ಡಾ| ಬಿ.ರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಸರ್ಕಾರದ ಯಾವುದೇ ಯೋಜನೆಯ ಸಾಲ, ಸಹಾಯಧನ ಮತ್ತಿತರ ಸೌಲಭ್ಯ ಪಡೆಯಲು ವರ್ಷಗಳ ಕಾಲ ಅಲೆಯಬೇಕಾಗುತ್ತದೆ. ಆದರೆ, ಇಲ್ಲಿ ನೇರ ಸಾಲ ಯೋಜನೆಯಡಿಯಲ್ಲಿ ಹೈನುಗಾರಿಕೆ ಮಾಡಲು ಯಾವುದೇ ಅರ್ಜಿ ಸಲ್ಲಿಸದ ವ್ಯಕ್ತಿಯ ಇಡೀ ಕುಟುಂಬದ ಎಲ್ಲ ಸದಸ್ಯರ ಬ್ಯಾಂಕ್ ಖಾತೆಗಳಿಗೆ ಸಾಲ ಮತ್ತು ಸಹಾಯಧನದ ಹಣ ಆರ್‌ಟಿಜಿಎಸ್ ಮೂಲಕ ಜಮಾ ಆಗಿದೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗುತ್ತದೆ ಎಂಬ ಹಂತದಲ್ಲಿ ಇಡೀ ಪ್ರಕರಣ ಬಹಿರಂಗಗೊಂಡಿದೆ.
Related Articles
Advertisement
ಗೊಂದಲದ ಹೇಳಿಕೆ: ಈ ಪ್ರಕರಣಕ್ಕೆ ಸಂಬಂಧಿಸಿ ಕಚೇರಿ ಅಧಿಕಾರಿ ಮತ್ತು ನೌಕರರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಸಂಶಯ ಹೆಚ್ಚಲು ಕಾರಣವಾಗಿದೆ. ವ್ಯವಸ್ಥಾಪಕ ಶಿವಲಿಂಗಯ್ಯ, ಕ್ಷೇತ್ರಾಧಿಕಾರಿ ಹಾಲಸ್ವಾಮಿ, ಕೇಸ್ ವರ್ಕರ್ ಕಾರ್ತಿಕ್ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದು, ಹಲವಾರು ಅನುಮಾನ ಮೂಡಿಸಿದೆ.
ಈ ಹಿಂದೆ ಜಿಲ್ಲಾ ವ್ಯವಸ್ಥಾಪಕರಾಗಿದ್ದವರಿಂದ ಈ ರೀತಿಯಾಗಿದೆ ಎಂದು ಒಬ್ಬರು ಹೇಳಿದರೆ, ಹಣ ಬಿಡುಗಡೆ ಮಾಡುವಂತೆ ಶಾಸಕರೊಬ್ಬರು ಶಿಫಾರಸು ಪತ್ರಗಳನ್ನು ನೀಡಿದ್ದರು ಎಂದು ಮತ್ತೂಬ್ಬರು ಹೇಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಹಣ ಪಡೆದಿರುವ ವ್ಯಕ್ತಿ ಕಚೇರಿಗೆ ಬಂದು ಗಲಾಟೆ ಮಾಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದೂ ಕೆಲ ಸಿಬ್ಬಂದಿ ಹೇಳುತ್ತಿದ್ದು ಎಲ್ಲವೂ ಅಸ್ಪಷ್ಟವಾಗಿದೆ.
ನಾನು ಯಾರಿಗೂ ಶಿಫಾರಸು ಪತ್ರ ನೀಡಿಲ್ಲ. ಪ್ರಕರಣ ಗಮನಕ್ಕೆ ಬಂದಿದ್ದು ಕೂಡಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಸಮಗ್ರ ತನಿಖೆ ಮಾಡಿ ಕ್ರಿಮಿನಲ್ ಮೊಕದ್ದಮೆ ಹೂಡಿ ಆರೋಪಿತರನ್ನು ಬಂಧಿಸುವಂತೆ ಸೂಚಿಸಿದ್ದೇನೆ.• ಟಿ.ರಘುಮೂರ್ತಿ, ಶಾಸಕರು, ಚಳ್ಳಕೆರೆ
ಪ್ರಕಾಶ್ ಎನ್ನುವ ವ್ಯಕ್ತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮನವಿ ಸಲ್ಲಿಸಲಾಗಿದೆ. ಈಗಾಗಲೇ ಅವರು 2.67 ಲಕ್ಷ ರೂ.ಗಳನ್ನು ಇಲಾಖೆಗೆ ಪಾವತಿಸಿದ್ದಾರೆ. ಇನ್ನೂ 2 ಲಕ್ಷ ರೂ. ಪಾವತಿಸಬೇಕಿದೆ. ಈ ಪ್ರಕರಣ ನನ್ನ ಅವಧಿಯಲ್ಲಿ ಆಗಿದ್ದಲ್ಲ. 2017-18ನೇ ಸಾಲಿನಲ್ಲಿ ನಡೆದಿದೆ.
•ಶಿವಲಿಂಗಯ್ಯ, ಜಿಲ್ಲಾ ವ್ಯವಸ್ಥಾಪಕರು, ಅಂಬೇಡ್ಕರ್ ಅಭಿವೃದ್ಧಿ ನಿಗಮ.