Advertisement

ಆರ್ಯವೈಶ್ಯ ನಿಗಮದಿಂದ ಸಾಲ ಸೌಲಭ್ಯ

06:51 AM Jun 20, 2020 | Lakshmi GovindaRaj |

ಹಾಸನ: ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮವು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆ ಆರಂಭಿಸಿದೆ ಎಂದು ನಿಗಮದ ಅಧ್ಯಕ್ಷ ಡಿ.ಎಸ್‌. ಅರುಣ್‌ ತಿಳಿಸಿದರು.  ಹಾಸನದ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಆರ್ಯ ವೈಶ್ಯ ಸಮಾಜದ ಫ‌ಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.

Advertisement

ಜಿಲ್ಲೆಯಿಂದ 38  ಫ‌ಲಾನುಭವಿಗಳಿಗೆ ತಲಾ 65 ಸಾವಿರ ರೂ.ಸಾಲ ನೀಡಲಾಗುತ್ತಿದೆ. ಫ‌ಲಾನುಭವಿ ಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾ ರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ  ಯೋಜನೆಯಡಿ ಎಂಜಿನಿಯರಿಂಗ್‌, ವೈದ್ಯಕೀಯ, ದಂತವೈದ್ಯಕೀಯ ಮತ್ತಿರ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗ‌ಳಿಗೆ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೇ.2ರ ಬಡ್ಡಿದರದಲ್ಲಿ ಗರಿಷ್ಠ 1  ಲಕ್ಷ ರೂ.  ಶೈಕ್ಷಣಿಕ ಸಾಲ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಶೇ.4ರ ಬಡ್ಡಿ ದರದಲ್ಲಿ ಗರಿಷ್ಠ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲಾಗುವುದು  ಎಂದರು.ರಾಜ್ಯದಲ್ಲಿ ಸ್ವಯಂ ಉದ್ಯೋಗ ನಡೆಸುವ ಆರ್ಯ ವೈಶ್ಯ ಸಮುದಾ ಯದ ವರಿಗೆ 100 ಫ‌ುಡ್‌ ಟ್ರಕ್‌ ವಿತರಿಸಲು 5 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯ ಮಂತ್ರಿ ಗಳಿಗೆ ಮನವಿ ಮಾಡಲಾಗಿದೆ ಎಂದರು. ನಿಗಮದ ಜಿಲ್ಲಾ  ವ್ಯವಸ್ಥಾಪಕ ಕೃಷ್ಣಕುಮಾರ್‌ ಹಾಗೂ ಆರ್ಯವೈಶ್ಯ ಮಂಡಳಿ ಕಾರ್ಯದರ್ಶಿ ವಿಶ್ವನಾಥ್‌, ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಯುವ ಪರಿಷತ್ತಿನ ರವಿ ನಂದನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next