Advertisement

ಸಾಲ ಮನ್ನಾ ಗೊಂದಲ ಬ್ಯಾಂಕ್‌ಗಳಿಂದ; ವರದಿ ವಿರುದ್ಧ ಸಿಎಂ ಕಿಡಿ

09:05 AM Jun 12, 2019 | Team Udayavani |

ಬೆಂಗಳೂರು: ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ವಿರುದ್ಧ ಕಿಡಿಯಾಗಿದ್ದಾರೆ.

Advertisement

ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ವರದಿ ವಿರುದ್ಧ ಕಿಡಿ ಕಾರಿದರು . ಬ್ಯಾಂಕ್‌ಗಳಿಂದ ಆಗಿರುವ ಗೊಂದಲಕ್ಕೆ ನಮ್ಮ ಮೇಲೆ ಯಾಕೆ ಆರೋಪ ಮಾಡುತ್ತೀರಿ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

ಕೇಂದ್ರ ಸರ್ಕಾರಕ್ಕೆ ಒಳಪಟ್ಟಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಆಗಿರುವ ತಪ್ಪು. ಅದನ್ನು ನಮ್ಮ ಮೇಲೆ ಯಾಕೆ ಹಾಕುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಮೋದಿ ಅವರ ಬಗ್ಗೆ ದಿನ ನಿತ್ಯ ಹೊಗಳುತ್ತೀರಿ ಹೋಗಿ ಮೋದಿಗೆ ಹೇಳಿ. ಇದರ ಬಗ್ಗೆಯೂ ನೀವು ಮಾತಾಡಿ .ರಾಜ್ಯ ಅಭಿವೃದ್ದಿಯಾಗಬೇಕೋ ಅಥವಾ ಹಾಳಾಗಬೇಕೋ ನೀವೇ ನಿರ್ಧರಿಸಿ ಎಂದು ಕಿಡಿ ಕಾರಿದರು.

ಸರಣಿ ಟ್ವೀಟ್‌ಗಳು
ಈ ಬಗ್ಗೆ ಟ್ವೀಟ್‌ಗಳ ಮೂಲಕವೂ ಸಿಎಂ ಎಚ್‌ಡಿಕೆ ಸ್ಪಷ್ಟನೆ ನೀಡಿದ್ದಾರೆ.

Advertisement

ಟ್ವೀಟ್‌ 1.*ಕೆಲವು ಮಾಧ್ಯಮಗಳಲ್ಲಿ ಸಾಲ ಮನ್ನಾ ಕುರಿತಂತೆ ಪ್ರಕಟವಾಗಿರುವ ಸುದ್ದಿಗೆ ಸ್ಪಷ್ಟನೆ:*

ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಟ್ವೀಟ್‌ 2. ಕೆಲವು ಮಾಧ್ಯಮಗಳಲ್ಲಿ ಸಾಲ ಮನ್ನಾ ಕುರಿತಂತೆ ಪ್ರಕಟವಾಗಿರುವ ಸುದ್ದಿಗೆ ಸ್ಪಷ್ಟನೆ:

ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಟ್ವೀಟ್‌3. ರಾಜ್ಯ ಸರ್ಕಾರದಿಂದ ಈ ಗೊಂದಲ ಉಂಟಾಗಿಲ್ಲ. ಹಾಗೂ ಚುನಾವಣೆಗೂ ಈ ಗೊಂದಲಕ್ಕೂ ಸಂಬಂಧವಿಲ್ಲ ಎನ್ನುವುದನ್ನೂ ಈ ಮೂಲಕ ಸ್ಪಷ್ಟಪಡಿಸಿದೆ. ಮಾಧ್ಯಮಗಳು ಇಂತಹ ವಿಷಯಗಳನ್ನು ಅಧಿಕೃತ ಮಾಹಿತಿ ಪಡೆದುಕೊಂಡ ನಂತರವೇ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next