Advertisement
ಅವರು ಶನಿವಾರ ವಂಡ್ಸೆ ಸಮೀಪದ ನೆಂಪುವಿನ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ರಾಜ್ಯ ಸರಕಾರ ಮತ್ತು¤ ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ದಲ್ಲಿ 387.31 ಕೋಟಿ ರೂ. ವೆಚ್ಚದ 392 ಕಾಮಗಾರಿ ಗಳಿಗೆ ಚಾಲನೆ ನೀಡಿ ಮಾತನಾಡಿದರು. ಸರಕಾರದ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಮಕ್ಕಳ ಶಿಕ್ಷಣ, ಮಹಿಳಾ ಸ್ವಾವಲಂಬನೆಗಾಗಿ ಸ್ತ್ರೀಶಕ್ತಿ ಸಂಘಟನೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ಸಲುವಾಗಿ ಮಹಿಳಾ ಸಶಕ್ತೀಕರಣಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅನೇಕ ಯೋಜನೆಯನ್ನು ರೂಪಿಸಲು ಚಿಂತನೆ ನಡೆಸಲಾಗಿದೆ ಎಂದರು.
ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮಾತ ನಾಡಿ, 8 ಗ್ರಾಮಗಳ ಕುಡಿಯುವ ನೀರು ಮತ್ತು 1,380 ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೌಕೂರು – ಸಿದ್ದಾಪುರ ಏತ ನೀರಾವರಿ ಯೋಜನೆಗೆ 73 ಕೋ.ರೂ. ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡ ಲಾಗಿದೆ. ಗಂಗೊಳ್ಳಿ ಜೆಟ್ಟಿಯು ಕಳಪೆ ಕಾಮಗಾರಿ ಯಿಂದ ಕುಸಿದಿದೆ. ಈ ಬಗ್ಗೆ ಡಿಸಿ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಮೀನುಗಾರಿಕಾ ಸಚಿವರ ಅಧ್ಯಕ್ಷತೆ ಯಲ್ಲಿ ಇತ್ತೀಚೆಗೆ ಸಭೆ ನಡೆಸಿ ಜೆಟ್ಟಿಯ ಪುನರ್ ನಿರ್ಮಾಣಕ್ಕಾಗಿ ಅಂದಾಜು 12 ಕೋ. ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮುಖ್ಯಮಂತ್ರಿ ಹಾಗೂ ಸಂಸದರ ಸಹಕಾರದಿಂದ 387 ಕೋ.ರೂ. ಅನುದಾನ ಬಿಡುಗಡೆಯಾಗಿದ್ದು, ಬೈಂದೂರು ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ, ಇನ್ನಷ್ಟು ಗ್ರಾಮೀಣ ಭಾಗದ, ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿ ಆಗಬೇಕಿದೆ ಎಂದವರು ಸಿಎಂಗೆ ಅಹವಾಲು ಸಲ್ಲಿಸಿದರು.
Related Articles
Advertisement
ಉಡುಪಿ ಡಿಸಿ ಜಿ. ಜಗದೀಶ್ ಸ್ವಾಗತಿಸಿ, ಅಪರ ಡಿಸಿ ಸದಾಶಿವ ಪ್ರಭು ವಂದಿಸಿದರು. ಅಶೋಕ್ ಕಾಮತ್ ನಿರೂಪಿಸಿದರು.
392 ಕಾಮಗಾರಿಗೆ 387 ಕೋ.ರೂ.ಬೈಂದೂರು ಕ್ಷೇತ್ರಕ್ಕೆ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ 73.4 ಕೋ.ರೂ., ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 73.70 ಕೋ.ರೂ., ವಾರಾಹಿ ನೀರಾವರಿ (ಸೌಕೂರು – ಸಿದ್ಧಾಪುರ ಏತ ನೀರಾವರಿ) ಯೋಜನೆಗೆ 119.71 ಕೋ.ರೂ., ಪ್ರಧಾನಮಂತ್ರಿ ಗ್ರಾಮೀಣ ಸಡಕ್ ರಸ್ತೆ ಅಭಿವೃದ್ಧಿಗೆ 45 ಕೋ.ರೂ. ಸೇರಿದಂತೆ 392 ವಿವಿಧ ಕಾಮಗಾರಿಗಳಿಗೆ ಒಟ್ಟು 387.31 ಕೋ.ರೂ. ಮಂಜೂರಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ಬೈಂದೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿನ ನಿಸರ್ಗ ರಮಣೀಯ ಪ್ರದೇಶಗಳನ್ನು ಬಳಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕಾರ್ಯಕ್ರಮ ರೂಪಿಸಲಾಗುವುದು.
– ಯಡಿಯೂರಪ್ಪ, ಮುಖ್ಯಮಂತ್ರಿ