Advertisement

ಶೂನ್ಯ ಬಡ್ಡಿ ದರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಾಲ: ಎಸ್.ಟಿ.ಸೋಮಶೇಖರ್ ಹೇಳಿಕೆ

02:13 PM Jun 09, 2020 | sudhir |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸ್ತ್ರೀಶಕ್ತಿ ಹಾಗೂ ಸ್ವ ಸಹಾಯ ಸಂಘಗಳಿಗೆ ನೀಡುವ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲ ಸೌಲಭ್ಯದ ಮಾದರಿಯಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದೆಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂ. ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರುದರು.

ರಾಜ್ಯದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವ ಸಹಾಯ ಸಂಘಗಳಿಗೆ ಕಾಯಕ ಬಂಧು ಕಾರ್ಯಕ್ರಮದಡಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಸಹಕಾರ ಇಲಾಖೆಯಲ್ಲಿ ಸಾಲ ಸೌಲಭ್ಯಕ್ಕೆ ೮೦ ಕೋಟಿ ಅನುದಾನ ಮೀಸಲು ಇಡಲಾಗಿದೆ ಎಂದರು. ಆದ್ದರಿಂದ ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡಲು ಸಹಕಾರ ಇಲಾಖೆ ಗಂಭೀರ ‌ಚಿಂತನೆ ನಡೆಸಿದೆ ಎಂದರು.

ಸಹಕಾರ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಗಂಭೀತ ಚಿಂತನರ ನಡೆಸಿದೆ ಎಂದರು.

ಕಾರ್ಯಕ್ರಮದಲ್ಲಿ ‌ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಸಂಸದ ಬಿ.ಎನ್.ಬಚ್ವೇಗೌಡ, ಶಾಸಕರಾದ ಜೆಕೆ ಕೃಷ್ಣಾರೆಡ್ಡಿ, ಎಸ್.ಎನ್.ಸುಬ್ಬಾರೆಡ್ಡಿ, ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ ‌ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next