Advertisement
ರಾಜ್ಯ ಸರ್ಕಾರ ಪೌರಾಡಳಿತ ನಿರ್ದೇಶನಾಲಯದ ಪ್ರಸ್ತಾವನೆಗೆ ಮನ್ನಣೆ ನೀಡಿ ಕೊನೆಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ (ಹಂತ 4) ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಿದೆ.
Related Articles
Advertisement
15 ದಿನಗಳೊಳಗಾಗಿ ಅನುಮೋದನೆ: ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನಮುನ್ಸಿಪಾಲಿಟಿ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾಮಟ್ಟದ ಸಮಿತಿ ರಚಿಸಿದೆ. ಈ ಸಮಿತಿಯ ಕ್ರಿಯಾ ಯೋಜನೆಯನ್ನು 15 ದಿನಗಳ ಒಳಗಾಗಿಅನುಮೋದಿಸಿ ರಾಜ್ಯ ಮಟ್ಟದ ಸಮಿತಿಗೆ ಶಿಫಾರಸು ಮಾಡಬೇಕಾಗಿದೆ ಹಾಗೂ ರಾಜ್ಯ ಮಟ್ಟದಸಮಿತಿಯು 15 ದಿನಗಳೊಳಗಾಗಿ ತಮ್ಮಅನುಮೋದನೆ ನೀಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.
ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಣೆ: ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಮಿತಿಯ ಅಧ್ಯಕ್ಷರಾಗಲಿದ್ದಾರೆ. ಜೊತೆಗೆ ಡೀಸಿ ಸಮಿತಿ ಸದಸ್ಯರಾಗಿರುತ್ತಾರೆ. ಅಲ್ಲದೆ, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯಿಂದ ಶಾಸಕರು, ನಗರ ಸ್ಥಳೀಯಸಂಸ್ಥೆಯ ಅಧ್ಯಕ್ಷರು, ಜಿಲ್ಲಾ ಯೋಜನಾನಿರ್ದೇಶಕರು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಪಿಡಬ್ಲೂéಡಿ ಕಾರ್ಯಪಾಲಕಅಭಿಯಂತರರು, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಸಮಿತಿಯು ಸಹರಚಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಯೋಜನಾ ನಿರ್ದೇಶಕರು, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು, ಸಹಾಯಕಕಾರ್ಯಪಾಲಕ ಅಭಿಯಂತರರು ಸದಸ್ಯರಾಗಲಿದ್ದಾರೆ. ಜಿಲ್ಲಾ ನಗರ ಅಭಿವೃದ್ಧಿ ಕೋಶದಕಾರ್ಯಪಾಲಕ ಅಭಿಯಂತರರು ಸದಸ್ಯ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಲಿದ್ದಾರೆ.
5 ನಗರ ಸ್ಥಳೀಯ ಸಂಸ್ಥೆಗೆ 85 ಕೋಟಿ ರೂ. ಮಂಜೂರು :
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಂಡಿಲ್ಲ ಎಂಬ ದೂರು ಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಮೇಲ್ದರ್ಜೆಗೇರಿದ ನಗರಸಭೆ, ಪುರಸಭೆ, ಪಪಂಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮಂಜೂರು ಮಾಡಿದೆ.ಇದರಿಂದ ನಗರ ಪ್ರದೇಶಗಳಲ್ಲಿ ಮೂಲ ಸೌಲಭ್ಯ ವೃದ್ಧಿಯಾಗಲಿದೆ. ಚಿಕ್ಕಬಳ್ಳಾಪುರ ನಗರಸಭೆಗೆ 40 ಕೋಟಿ ರೂ., ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ನಗರಸಭೆಗೆ ತಲಾ 30 ಕೋಟಿ ರೂ., ಬಾಗೇಪಲ್ಲಿ ಪುರಸಭೆಗೆ 10 ಕೋಟಿ ರೂ. ಹಾಗೂ ಗುಡಿಬಂಡೆಯ ಪಪಂಗೆ 5 ಕೋಟಿ ರೂ. ಸರ್ಕಾರ ಮಂಜೂರು ಮಾಡಿದೆ.
ಮುಖ್ಯಮಂತ್ರಿಗಳ ಅಮೃತನಗರೋತ್ಥಾನ ಯೋಜನೆಹಂತ-4 ಅಡಿಯಲ್ಲಿ ರಾಜ್ಯ ಸರ್ಕಾರರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಅಭಿವೃದ್ಧಿಗಾಗಿ 3,885 ಕೋಟಿ ರೂ.ಘೋಷಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಗೆ145 ಕೋಟಿ ರೂ. ಅನುದಾನ ನೀಡಿದಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ.– ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ
ಅಖಂಡ ಕೋಲಾರ ಜಿಲ್ಲೆಯಲ್ಲಿ ಮೊದಲಬಾರಿಗೆ ಶಿಡ್ಲಘಟ್ಟ ನಗರದಲ್ಲಿ ಒಳಚರಂಡಿ ಯೋಜನೆ ಯಶಸ್ವಿ ಆಗಿ ಅನುಷ್ಠಾನಗೊಳಿಸಲಾಗಿದೆ. ಉಳಿದ ಪ್ರದೇಶದಲ್ಲಿ 2ನೇ ಹಂತದಲ್ಲಿ ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಕೊರೊನಾ ಸೋಂಕಿನ ಪ್ರಭಾವದಿಂದ ಮಂಜೂರಾದ ಅನುದಾನ ವಾಪಸ್ ಹೋಯಿತು. ಮತ್ತೆ ಅನುದಾನ ಬಂದಿದೆ. ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.– ವಿ.ಮುನಿಯಪ್ಪ, ಶಾಸಕ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ