Advertisement

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

03:39 AM Nov 27, 2024 | Team Udayavani |

ಬೆಂಗಳೂರು/ಹಾಸನ/ಕೊಪ್ಪಳ: ರಾಜ್ಯಾದ್ಯಂತ ನ. 23ರಂದು ಹಲವೆಡೆ ನಡೆದ ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಫ‌ಲಿತಾಂಶ ಮಂಗಳವಾರ ಪ್ರಕಟವಾಗಿದೆ.

Advertisement

ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯ 8 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಅಭ್ಯರ್ಥಿಗಳು ಜಯ ಗಳಿಸಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಗಳು ಮುಖಭಂಗ ಅನುಭವಿಸಿದ್ದಾರೆ. ಇನ್ನೊಂದು ಸ್ಥಾನದಲ್ಲಿ ಪಕ್ಷೇತರನ ಪಾಲಾಗಿದೆ. 7 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಶಾಸಕ ಶಿವಲಿಂಗೇಗೌಡ ಮೇಲುಗೈ ಸಾಧಿಸಿದ್ದಾರೆ.

ಕೊಪ್ಪಳ ನಗರಸಭೆಯಲ್ಲಿ ತೆರವಾಗಿದ್ದ 11 ಮತ್ತು 8ನೇ ವಾರ್ಡ್‌ ಚುನಾವಣೆಯಲ್ಲಿ ತಲಾ ಒಂದೊಂದು ಸ್ಥಾನ ಬಿಜೆಪಿ, ಕಾಂಗ್ರೆಸ್‌ ಪಡೆದಿವೆ. ವಿಜಯಪುರ ಮಹಾನಗರ ಪಾಲಿಕೆಯ 29ನೇ ವಾರ್ಡ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಿರೀಶ ವಿಜಯಕುಮಾರ ಪಾಟೀಲ್‌ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣ ಪಂಚಾಯತ್‌ನ 5ನೇ ವಾರ್ಡ್‌ನಲ್ಲಿ ಪೌರಕಾರ್ಮಿಕರೊಬ್ಬರು ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಿಜೆಪಿಯ ಮಹದೇವ 248 ಮತ ಪಡೆದರೆ, ಕಾಂಗ್ರೆಸ್‌ನ ಶಶಿಧರ್‌ 224 ಮತ ಪಡೆದಿದ್ದು. ಮಹದೇವ ಅವರು 24 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next