Advertisement

Election Commission ಸ್ಥಳೀಯ ಸಂಸ್ಥೆ ಚುನಾವಣೆ: ವೇಳಾಪಟ್ಟಿ ಪ್ರಕಟ

11:39 PM Dec 04, 2023 | Team Udayavani |

ಬೆಂಗಳೂರು: ರಾಜ್ಯದ ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ, ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್‌, ಯಾದಗಿರಿ ಜಿಲ್ಲೆಯ ಹುಣಸಗಿ ಪ.ಪಂ., ಕಲಬುರಗಿ ಜಿಲ್ಲೆಯ ವಾಡಿ ಪುರಸಭೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ ವಿವಿಧ ಜಿಲ್ಲೆಗಳ 30 ನಗರ ಸ್ಥಳೀಯ ಸಂಸ್ಥೆಗಳ 36 ವಾರ್ಡ್‌ ಗಳ ಉಪಚುನಾವಣೆಗೆ ಡಿ.27ರಂದು ಮತದಾನ ನಡೆಯಲಿದೆ. ಚುನಾ ವಣೆ ಸಂಬಂಧ ಜಿಲ್ಲಾಧಿಕಾರಿಗಳು ಡಿ.8ರಂದು ಅಧಿಸೂಚನೆ ಹೊರಡಿಸಲಿದ್ದಾರೆ.

ಡಿ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, 16 ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆದುಕೊಳ್ಳಲು 18 ಕೊನೆಯ ದಿನವಾಗಿದೆ. 27ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣೆ ನಡೆಯಲಿರುವಲ್ಲಿ ಡಿ.8ರಂದು 30ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆಯೋಗದ ಅಧೀನ ಕಾರ್ಯದರ್ಶಿ ಎನ್‌.ಆರ್‌. ನಾಗರಾಜು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next