Advertisement

ಲೋಕಲ್‌ ಫೈಟ್‌: ಮತ ಎಣಿಕೆ ಇಂದು

10:34 PM Jun 02, 2019 | Lakshmi GovindaRaj |

ಬೆಂಗಳೂರು: ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ನಗರ ಸ್ಥಳೀಯ ಸಂಸ್ಥೆಗಳ 140 ವಾರ್ಡ್‌ಗಳ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪುರಸಭೆ, ನೆಲಮಂಗಲ ಪುರಸಭೆ, ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ, ಹೊಸನಗರ ಮತ್ತು ಸೊರಬ ಪಟ್ಟಣ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಚುನಾವಣಾ ತಕರಾರು ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆ ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅದರಂತೆ, ಈ ಎರಡೂ ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29ರ ಬದಲು ಜೂ.1ಕ್ಕೆ ಮತದಾನ ನಡೆದಿತ್ತು.

ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಏಕಕಾಲದಲ್ಲಿ ನಡೆಯಲಿ ಎಂಬ ಉದ್ದೇಶದಿಂದ ಎರಡೂ ಜಿಲ್ಲೆಗಳ ಉಳಿದ ಸ್ಥಳೀಯ ಸಂಸ್ಥೆಗಳ ಮತ ಎಣಿಕೆಯನ್ನು ಮೇ 31ರ ಬದಲು ಜೂ.3ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next