Advertisement

Karnataka Government; ಸ್ಥಳೀಯಾಡಳಿತ ಮೀಸಲು ನಿಗದಿ: ಶೀಘ್ರ ಚುನಾವಣೆ?

01:28 AM Aug 06, 2024 | Team Udayavani |

ಬೆಂಗಳೂರು: ಒಂದು ವರ್ಷಕ್ಕೂ ಅಧಿಕ ಕಾಲದಿಂದ ನನೆಗುದಿಗೆ ಬಿದ್ದಿದ್ದ 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯತ್‌ಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೊನೆಗೂ ಅಧ್ಯಕ್ಷ-ಉಪಾಧ್ಯಕ್ಷ ಭಾಗ್ಯ ದೊರೆಯಲಿದೆ.

Advertisement

ಒಟ್ಟು 5 ವರ್ಷಗಳ ಅವಧಿಯಲ್ಲಿ ಮೊದಲ 30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷ ಅವಧಿ ಮುಗಿದ ಬಳಿಕ 2ನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲಾತಿ ವಿಚಾರ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ನ್ಯಾ| ಭಕ್ತವತ್ಸಲ ಆಯೋಗವನ್ನು ರಚಿಸಿತ್ತು. ಅದರ ವರದಿ ಸಲ್ಲಿಕೆಯಾಗಬೇಕಾದ ಹಿನ್ನೆಲೆಯಲ್ಲಿ ಮೀಸಲಾತಿ ಮತ್ತೆ ನನೆಗುದಿಗೆ ಬಿದ್ದಿತ್ತು. ಈಗ ಅಂತಿಮವಾಗಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಸರಕಾರವು 2022ರ ಸೆ. 12ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೀಸಲಾತಿ ಪಟ್ಟಿಯನ್ನೇ ಅಂತಿಮಗೊಳಿಸಲು ನಿರ್ಧರಿಸಿದ್ದು, ಅದರಂತೆ ನಗರಸಭೆ, ಪುರಸಭೆ ಹಾಗೂ ಪ. ಪಂಚಾಯತ್‌ಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.

ಏನಾಗಿತ್ತು?
-ಆಡಳಿತಕ್ಕೆ ಇರುವ ಒಟ್ಟು 5 ವರ್ಷದ ಅವಧಿಯಲ್ಲಿ ಮೊದಲ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಅವಧಿ ನಿಗದಿ.
-2ನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲು ವಿಚಾರ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಮೀಸ ಲಾತಿ ನಿಗದಿ ಸಾಧ್ಯವಾಗಿರಲಿಲ್ಲ.
-ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡಲು ಸು.ಕೋರ್ಟ್‌ನಿಂದ ನಿರ್ದೇಶನ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನ್ಯಾ| ಭಕ್ತವತ್ಸಲ ಆಯೋಗ ರಚಿಸಿತ್ತು.
-ಆಯೋಗವು ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಬೇಕಿದ್ದರಿಂದ ಮೀಸಲಾತಿ ಮತ್ತೆ ನನೆಗುದಿಗೆ.
-ಅಂತಿಮವಾಗಿ ಮೀಸಲು ಅಧಿಸೂಚನೆ ಹೊರಡಿಸಿದ ಸರಕಾರ.

Advertisement

Udayavani is now on Telegram. Click here to join our channel and stay updated with the latest news.

Next