Advertisement

ಸ್ಥಳೀಯ ಸಂಸ್ಥೆಗಳು ಸ್ವಾವಲಂಬಿಗಳಾಗಬೇಕು

01:23 PM Apr 24, 2017 | |

ದಾವಣಗೆರೆ: ಸ್ಥಳೀಯ ಆಡಳಿತ ಸಂಸ್ಥೆಗಳು ಎಲ್ಲದಕ್ಕೂ ಸರ್ಕಾರವನ್ನು ಅವಲಂಬಿಸದೆ, ಸ್ವಾವಲಂಬಿಯಾಗುವತ್ತ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕರೆ ನೀಡಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಭಾನುವಾರ ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್‌ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement

ಸರ್ಕಾರ ಪಂಚಾಯತ್‌ಗಳ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ 33 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ. ಆದರೆ, ಇದರಿಂದ ಪಂಚಾಯತ್‌ ಸಂಸ್ಥೆಗಳು ಸಮಾಧಾನ ಪಟ್ಟುಕೊಳ್ಳಬಾರದು. ಬದಲಿಗೆ ತಮ್ಮ ಆದಾಯವನ್ನು ತಾವೇ ಸಂಗ್ರಹಿಸು ಮಟ್ಟಕ್ಕೆ ಬರಬೇಕಿದೆ ಎಂದರು. 

ಜವಾಹರ್‌ಲಾಲ್‌, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಹೀಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್‌ ನ ನಾಯಕರು ತಮ್ಮ ಅವಧಿಯಲ್ಲಿ ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮ ರೂಪಿಸಿದರು. ರಾಜ್ಯ ಸರ್ಕಾರ ಕಳೆದ 4 ವರ್ಷಗಳ ಅವಧಿಯಲ್ಲಿ ಇದೇ ಮಾರ್ಗದಲ್ಲಿ ಸಾಗುತ್ತಿದೆ. ಚುನಾವಣೆಗೂ ಮುನ್ನ ನೀಡಿದ್ದ 165 ಆಶ್ವಾಸನೆಗಳಲ್ಲಿ 145 ಆಶ್ವಾಸನೆಗಳನ್ನು ಈಗಾಗಲೇ ಈಡೇರಿಸಿದೆ.

ಅನ್ನ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜನರಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಮುಟ್ಟಿಸುವ ಸಂಬಂಧ ಸಂಘಟನೆಯ ಪದಾಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ತಳಹಂತದಿಂದ ಕೆಲಸ ಮಾಡಿ ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು. 

ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಮಾತನಾಡಿ, ಕಾಂಗ್ರೆಸ್‌ ಮಾತ್ರವೇ ಬಡವರ ಬಗ್ಗೆ ಕಾಳಜಿ ವಹಿಸಿದೆ. ಇದೇ ಕಾರಣಕ್ಕೆ ಕಳೆದ ಯುಪಿಎ ಅಧಿಕಾರಾವಧಿಯಲ್ಲಿ ಗ್ರಾಮೀಣ ಜನರ ಅಭ್ಯುದಯ, ಗುಳೇ ತಡೆಯಲು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಜಾರಿಮಾಡಿತು.

Advertisement

ಇಂತಹ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ನೀಡಿದೆ ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಮೇಯರ್‌ ಅನಿತಾಬಾಯಿ ಮಾಲತೇಶ್‌ ಜಾಧವ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಶ್ವಿ‌ನಿ ಪ್ರಶಾಂತ್‌, ಜಿಪಂ ಸದಸ್ಯರಾದ ಬಸವಂತಪ್ಪ,ಓಬಳಪ್ಪ,ದೂಡಾ ಅಧ್ಯಕ್ಷ ಶಾಮನೂರು ರಾಮಚಂದ್ರಪ್ಪ,

ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಡಿ.ಬಸವರಾಜ್‌,ಎಪಿಎಂಸಿ ಅಧ್ಯಕ್ಷ ಮುದೇಗೌಡ್ರ ಗಿರೀಶ್‌, ಪಾಲಿಕೆ ಸದಸ್ಯ ದಿನೇಶ್‌ ಕೆ ಶೆಟ್ಟಿ ಇತರೆ ಮುಖಂಡರು ವೇದಿಕೆಯಲ್ಲಿದ್ದರು. ಮುಖಂಡರಾದ ವೆಂಕಟ್‌ ರಾವ್‌ ಘೋರ್ಪಡೆ, ಶಾಸಕ ಡಿ.ಆರ್‌.ಪಾಟೀಲ್‌, ಮಾಜಿ ಸಂಸದ ಸಿ.ನಾರಾಯಣಸ್ವಾಮಿ,ಬಿ.ಎನ್‌.ಸಂದೀಪ್‌ ವಿವಿಧ ವಿಷಯಗಳ ಕುರಿತು ಮಾತನಾಡಿದರು.  

Advertisement

Udayavani is now on Telegram. Click here to join our channel and stay updated with the latest news.

Next