ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಗ್ರಾಮೀಣ ಜನರ ಆರೋಗ್ಯ ಸಮಸ್ಯೆಗೆ ಸ್ಥಳೀಯವಾಗಿ ಪರಿಹಾರ ಸಿಗಬೇಕು ಎಂಬುದು ಸರಕಾರದ ಆಶಯವಾಗಿದೆ. ಸಿಬಂದಿ ಕೊರತೆ, ಲ್ಯಾಬ್ ಸೌಲಭ್ಯಗಳ ಕೊರತೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೆ. 27ರಂದು ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ವನ್ನು ಅವರು ಟೇಪ್ ಕತ್ತರಿಸಿ ಉದ್ಘಾ ಟಿಸಿ, ಸರಕಾರದ 1.30 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜನರು ಆರೋಗ್ಯ ಸಮಸ್ಯೆ ಸಂದರ್ಭ ಇದರ ಸದುಪಯೋಗ ಪಡೆಯಬೇಕು ಎಂದರು.
ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿ ಗುತ್ತು ಮತ್ತು ಗಣ್ಯರು ದೀಪ ಬೆಳಗಿಸಿ ದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ. ಸದಸ್ಯರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ರವೀಂದ್ರ ಕಂಬಳಿ, ಮಮತಾ ಡಿ.ಎಸ್. ಗಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್ ಅಲಿ, ಮಂಚಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ, ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಸಾಲೆತ್ತೂರು ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ರಾ.ಆ. ಅಭಿಯಾನ ರಾಜ್ಯ ನಿರ್ದೇಶಕ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ರಾವ್, ತಾ| ಆರೋಗ್ಯ ಅಧಿಕಾರಿ ಡಾ| ದೀಪಾ ಪ್ರಭು, ತಹಶೀಲ್ದಾರ್ ರಶ್ಮಿ ಎಸ್. ಆರ್., ಮಂಚಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಕೃಷ್ಣಮೂರ್ತಿ, ಪ್ರಭಾರ ವೈದ್ಯಾಧಿಕಾರಿ ರೋಹಿಣಿ ಉಪಸ್ಥಿತರಿದ್ದರು.
ವಿವಿಧ ವ್ಯವಸ್ಥೆ
ನೂತನ ಕಟ್ಟಡದಲ್ಲಿ ಹೊರರೋಗಿ ವಿಭಾಗ, ಆರು ಬೆಡ್‌ನ ಒಳರೋಗಿಗಳ ಕೊಠಡಿ, ಹೆರಿಗೆ ಕೊಠಡಿ, ಶಸ್ತ್ರ ಚಿಕಿತ್ಸಾ ವಿಭಾಗ, ಪ್ರಯೋಗಾಲಯ, ಔಷಧಾಲಯ ವ್ಯವಸ್ಥೆ ಇದೆ. ಸ್ಥಳೀಯರ ಬೇಡಿಕೆ ಈಡೇರಿದೆ.
- ರಾಜೇಶ್ ನಾೖಕ್, ಶಾಸಕರು